Karnataka new opposition leader : ರಾಜ್ಯ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕ ಆಯ್ಕೆ, ಪ್ರತಿಪಕ್ಷಗಳ ನಾಯಕ ಆಯ್ಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಭಾನುವಾರ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕರ್ನಾಟಕ ವಿಪಕ್ಷ ನಾಯಕರ(Karnataka new opposition leader) ಆಯ್ಕೆಗಾಗಿ ರಾಜ್ಯ ಬಿಜೆಪಿ ನಾಯಕರು ಹಾಗೂ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದು,ಆದರೆ ಈವರೆಗೂ ಅಂತಿಮ ನಿರ್ಧಾರ ಇನ್ನೂ ಆಗಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಸೋಮವಾರ ಕೇಂದ್ರದಿಂದ ವೀಕ್ಷಕರಾದ ವಿನೋದ್ ತಾವೆ, ಮನ್ಸೂಖ್ ಮಾಂಡವೀಯ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ವೀಕ್ಷಕರು ರಾಜ್ಯ ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಬಳಿಕ ಹೈಕಮಾಂಡ್ ಗೆ ಮಾಹಿತಿ ನೀಡಲಿದ್ದು, ಬಳಿಕ ಯಾರು ವಿಪಕ್ಷ ನಾಯಕ ಎಂಬುವುದು ನಿರ್ಧಾರವಾಗಲಿದೆ.
ವಿಪಕ್ಷ ನಾಯಕನ ಆಯ್ಕೆಗೂ ತಿಣುಕಾಟ ನಡೆಸುತ್ತಿರುವ ಬಿಜೆಪಿಯ ಪರಿಸ್ಥಿತಿ ರಾಜಕೀಯ ವಲಯದಲ್ಲಿ ಕುಹಕದ ಮಾತುಗಳು ಕೇಳಿ ಬರುತ್ತಿದೆ.
ಇದನ್ನೂ ಓದಿ: SSLC ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ; ಪೂರಕ ಪರೀಕ್ಷೆಯ ಸ್ಕ್ಯಾನ್ಡ್ ಪ್ರತಿ ಬಗ್ಗೆ ಇಲ್ಲಿದೆ ವಿವರ
