Jagadish Shettar: ಲೋಕಸಭೆ ಚುನಾವಣೆಗೆ (Election) ಸದ್ದಿಲ್ಲದೆ ಆಪರೇಷನ್ ಶುರು ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar), ಬಿಜೆಪಿ (BJP) ಪಾಳಯಕ್ಕೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ನಿಂದ ಎಂಎಲ್ಸಿ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿಯ ಪ್ರಮುಖ ನಾಯಕರನ್ನು ಕಾಂಗ್ರೆಸ್ನತ್ತ (CONGRESS) ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಹೌದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಜಗದೀಶ್ ಶೆಟ್ಟರ್, ಬಿಜೆಪಿಯ ಪ್ರಮುಖ ನಾಯಕ, ಮಾಜಿ ಸಿಎಂ ಯಡಿಯೂರಪ್ಪ (Former CM Yediyurappa) ಸಂಬಂಧಿ ಎಸ್ ಐ ಚಿಕ್ಕನಗೌಡರ್ ಅವರನ್ನು ಕಾಂಗ್ರೆಸ್ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಗೋಳ ಮಾಜಿ ಶಾಸಕರಾಗಿದ್ದ ಚಿಕ್ಕನಗೌಡರ್ (SI (Chikkanagowdar), ಬಿಜೆಪಿಯಿಂದ ಟಿಕೆಟ್ ವಂಚಿತರಾಗಿದ್ದರು. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳಿದು ಸೋತಿದ್ದರು. ಸೋಲಿನ ಬಳಿಕ ತಟಸ್ಥರಾಗಿದ್ದ ಚಿಕ್ಕನಗೌಡರ್ ಇದೀಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಚಿಕ್ಕನಗೌಡರ್ ಶೀಘ್ರದಲ್ಲಿಯೇ ಅಪಾರ ಸಂಖ್ಯೆಯ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಲು ಮುಂದಾಗ್ತಿದ್ದಾರೆ.
ಶೆಟ್ಟರ್ ಜೊತೆ ಒಂದು ಸುತ್ತಿನ ಮಾತುಕತೆ ಮಾಡಿರುವ ಎಸ್ ಐ ಚಿಕ್ಕನಗೌಡರ್,ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸ್ವಗೃಹದಲ್ಲಿ ಚಿಕ್ಕನಗೌಡರ್ ಅವರು ಬೆಂಬಲಿಗರ ಸಭೆ ನಡೆಸಿದರು. ಹಾಗೂ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದರು.
ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡೋಣ. ಕಾಂಗ್ರೆಸ್ಗೆ ಮುಂದಿನ ದಿನಗಳಲ್ಲಿ ಶಕ್ತಿ ತುಂಬೋಣ ಎಂದು ಚಿಕ್ಕನಗೌಡರ್ ತಮ್ಮ ಆಪ್ತರಿಗೆ ಕರೆ ನೀಡಿದರು.
