Home » BIGG NEWS: ಮಹಿಳೆಯರಿಗೆ ಇನ್ನೊಂದು ಗ್ಯಾರಂಟಿ | ಶಕ್ತಿ ಯೋಜನೆ, ಗೃಹಲಕ್ಷ್ಮಿ ಆಯ್ತು, ಇನ್ನು ಸ್ತ್ರೀಯರಿಗೆ 3 ದಿನ ರಜೆ !

BIGG NEWS: ಮಹಿಳೆಯರಿಗೆ ಇನ್ನೊಂದು ಗ್ಯಾರಂಟಿ | ಶಕ್ತಿ ಯೋಜನೆ, ಗೃಹಲಕ್ಷ್ಮಿ ಆಯ್ತು, ಇನ್ನು ಸ್ತ್ರೀಯರಿಗೆ 3 ದಿನ ರಜೆ !

0 comments
BIGG NEWS

BIGG NEWS: ರಾಜ್ಯದಲ್ಲಿ ಕಾಂಗ್ರೆಸ್ (congress) ಅಧಿಕಾರದ ಚುಕ್ಕಾಣಿ ಹಿಡಿದಿದೆ. ಐದು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರಂಟಿಗಳನ್ನು (Congress 5 Guarantee) ಜಾರಿಗೆ ತಂದಿದೆ. ಈಗಾಗಲೇ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಕೂಡ ವ್ಯಕ್ತವಾಗಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಿದೆ. ಅಲ್ಲದೆ, ನಿನ್ನೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಮ್ಮ 14ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ (Karnataka Budget 2023) ವಿವಿಧ ಇಲಾಖೆಗಳಿಗೆ ಅನುದಾನ ಘೋಷಿಸಿದ್ದಾರೆ.

ಇದೀಗ ಸಿದ್ದರಾಮಯ್ಯ ಸರ್ಕಾರ ರಾಜ್ಯದ ‘ಸರ್ಕಾರಿ ಮಹಿಳಾ ನೌಕರ’ರಿಗೆ ಗುಡ್’ನ್ಯೂಸ್ (BIGG NEWS) ನೀಡಿದೆ. ಇಂದು ಬೆಂಗಳೂರಿನಲ್ಲಿ ನಡೆದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿಯಾಗಿದ್ದು, ಈ ವೇಳೆ ಮಾತನಾಡಿದ ಅವರು, ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಲವು ದಿನಗಳಿಂದ ರಾಜ್ಯದ ಸರ್ಕಾರಿ ಮಹಿಳಾ ನೌಕರರಿಗೆ (Karnataka Government Women Worker) ಮುಟ್ಟಿನ ಸಂದರ್ಭದಲ್ಲಿ ರಜೆ ನೀಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗಿತ್ತು. ಇದೀಗ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಹೇಳಿದ್ದಾರೆ.

 

ಇದನ್ನು ಓದಿ: Honeymoon Video: ಬಿಳಿಯ ಗೌನ್ ಇಳಿದು, ಶುಭ್ರ ಬ್ರಾ ಸರಿದು – ಸ್ವಿಮ್ಮಿಂಗ್ ಪೂಲ್’ನಲ್ಲಿ ನಡೆದೇ ಹೋಯ್ತು ಹನಿಮೂನ್ ! 

You may also like

Leave a Comment