8
Plane Crash: ಇಂದು ಬೆಳಗ್ಗೆ 10 ಗಂಟೆಯ ಹೊತ್ತಿಗೆ ನೇಪಾಳದ ಸೋಲುಕುಂಬುನಿಂದ ಕಣ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ನಾಪತ್ತೆಯಾಗಿದೆ. ಸತತ ಹುಡುಕಾಟದ ನಂತರ ಇದೀಗ ಹೆಲಿಕಾಪ್ಟರ್ ಅವಶೇಷಗಳು ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದ್ದು, 6 ಮಂದಿ ದುರಂತ ಅಂತ್ಯ ಕಂಡಿದ್ದಾರೆ.
ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿಗೆ ಕಂಟ್ರೋಲ್ ಟವರ್ ರೆಡಾರ್ ನಿಂದ ಸಂಪರ್ಕ ಕಳೆದುಕೊಂಡಿದೆ. ಬಳಿಕ ವಿಮಾನ ಪತನಗೊಂಡಿದೆ (Plane Crash). ಸದ್ಯ ವಿಮಾನದ ಅವಶೇಷ ಪತ್ತೆಯಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಐದು ಮಂದಿ ವಿದೇಶಿಯರೂ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಈವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
