4
Oommen chandy : ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ( Oommen chandy ) ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಉಮ್ಮನ್ ಚಾಂಡಿ ಅವರು 2004 ರಿಂದ 2006 ರವರೆಗೆ ಮತ್ತು 2011 ರಿಂದ 2016 ಅವಧಿವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. 2006 ರಿಂದ 2011ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು.
