Home » SSLC-2nd PUC Supplementary Exams: SSLC PUC ವಿದ್ಯಾರ್ಥಿಗಳಿಗೆ ಇನ್ನೂ ಗುಡ್ ನ್ಯೂಸ್: ವರ್ಷಕ್ಕೆ ಹಲವು ಬಾರಿ ಪೂರಕ ಪರೀಕ್ಷೆ !

SSLC-2nd PUC Supplementary Exams: SSLC PUC ವಿದ್ಯಾರ್ಥಿಗಳಿಗೆ ಇನ್ನೂ ಗುಡ್ ನ್ಯೂಸ್: ವರ್ಷಕ್ಕೆ ಹಲವು ಬಾರಿ ಪೂರಕ ಪರೀಕ್ಷೆ !

0 comments
SSLC-2nd PUC Supplementary Exams

SSLC-2nd PUC Supplementary Exams: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಯ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಭರ್ಜರಿ ಗುಡ್ ನ್ಯೂಸ್. ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯನ್ನು (SSLC and 2nd PUC Supplementary Exams ) ವರ್ಷದಲ್ಲಿ ಒಂದು ಬಾರಿ ಮಾತ್ರವೇ ನಡೆಸಲಾಗುತ್ತಿತ್ತು. ಇದೀಗ ಈ ಪೂರಕ ಪರೀಕ್ಷೆಯನ್ನು ಎರಡು ಬಾರಿ ನಡೆಸಲು ಶಿಕ್ಷಣ ಇಲಾಖೆಯು ( Education Department) ಚಿಂತನೆ ನಡೆಸಿದೆ.

ಹೌದು, ಇಲ್ಲಿಯವರೆಗೆ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಅನಿವಾರ್ಯ ಕಾರಣದಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗಾಗಿ ತಿಂಗಳೊಳಗೆ ಪೂರಕ ಪರೀಕ್ಷೆ ನಡೆಸುತ್ತಿದ್ದರು. ಆದರೆ ಇನ್ನು ಮುಂದೆ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ ಪೂರಕ ಪರೀಕ್ಷೆ (SSLC-2nd PUC Supplementary Exams )ಯನ್ನು ಎರಡು ಬಾರಿ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಇಲ್ಲಿಯವರೆಗೆ ಪೂರಕ ಪರೀಕ್ಷೆಯಲ್ಲಿಯೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕೆಂದರೆ ಮತ್ತೆ ಒಂದು ವರ್ಷ ಕಾಯಬೇಕಿತ್ತು. ಇದರಿಂದಾಗಿ ಒಂದು ವರ್ಷ ವಿದ್ಯಾರ್ಥಿಗಳ ಕಾಲ ವ್ಯರ್ಥವಾಗುತ್ತಿತ್ತು. ಮತ್ತೆ ಕೆಲ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅಲ್ಲಿಗೆ ನಿಲ್ಲಿಸುತ್ತಿದ್ದರು. ಹೀಗಾಗಿ ಹೊಸ ಪರೀಕ್ಷಾ ಕ್ರಮದಂತೆ ಪ್ರಸಕ್ತ ವರ್ಷದಲ್ಲಿ ಎರಡು ಬಾರಿಗೆ ಪೂರಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ 15 ದಿನಗಳ ಒಳಗಾಗಿ ಎರಡನೇ ಪೂರಕ ಪರೀಕ್ಷೆ ನಡೆಸಲು ಉದ್ದೇಶಿಸಿದೆ.

ಈ ಬಗ್ಗೆ ಸಚಿವ ಮಧು ಬಂಗಾರಪ್ಪ(Madhu bangarappa ) ಅವರು ಶಿಕ್ಷಣ ಕ್ಷೇತ್ರದ ಪ್ರಮುಖರೊಂದಿಗೆ ಚರ್ಚೆ ನಡೆಸಿ, ರೂಪುರೇಷೆಗಳು, ಪರೀಕ್ಷಾ ಕ್ರಮದ ಬಗ್ಗೆಯೂ ಕರಡು ಸಿದ್ಧಪಡಿಸಲು ನಿರ್ದೇಶಿಸಿದ್ದಾರೆ. ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮವಹಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.

 

ಇದನ್ನು ಓದಿ: Liquor Brands: ಭಾರತೀಯರಿಗೆ ಅತ್ಯಂತ ಪ್ರಿಯವಾಗೋ ಮದ್ಯ ಯಾವುದು ಗೊತ್ತಾ?! ಇಂಟೆರೆಸ್ಟಿಂಗ್ ಮಾಹಿತಿ ಇಲ್ಲಿದೆ

You may also like

Leave a Comment