Aadhaar Card: ಪ್ರಸ್ತುತ ಕೇಂದ್ರ ಸರ್ಕಾರವು, ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ. ಆಧಾರ್ ಕಾರ್ಡ್ (Aadhaar Card) ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಸ್ಪಷ್ಟನೆ ನೀಡಿದೆ.
ಸದ್ಯ ಲೋಕಸಭೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾತನಾಡಿ , “ಶಿಕ್ಷಣವು ಸಂವಿಧಾನದ ಸಮಕಾಲೀನ ಪಟ್ಟಿಯಲ್ಲಿದೆ ಮತ್ತು ಹೆಚ್ಚಿನ ಶಾಲೆಗಳು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ವ್ಯಾಪ್ತಿಗೆ ಬರುತ್ತವೆ. ಆದರೆ 05.09.2018 ರ ಸುತ್ತೋಲೆಯ ಪ್ರಕಾರ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕಾಗಿ ಮಕ್ಕಳಿಗೆ ಪ್ರವೇಶ ನಿರಾಕರಿಸಬಾರದು ಎಂದು ಹೇಳಿದರು.
2018 ಮತ್ತು 2021ರಲ್ಲಿ ಈ ಕುರಿತು ಹಿಂದಿನ ಪ್ರಕಟಣೆಗಳನ್ನು ಪುನರುಚ್ಚರಿಸಿದ ಕೇಂದ್ರ, ಕೆಲವು ಶಾಲೆಗಳು ಇನ್ನೂ ಪ್ರವೇಶಕ್ಕಾಗಿ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸುತ್ತಿರುವ ವರದಿಗಳ ಹಿನ್ನಲೆಯಲ್ಲಿ ಈ ಸ್ಪಷ್ಟನೆ ನೀಡಿದೆ ಎನ್ನಲಾಗಿದೆ.
ಇನ್ನು ಮುಂದೆ ಯಾವುದೇ ಶಿಕ್ಷಣ ಸಂಸ್ಥೆ ಅಥವಾ ಮಂಡಳಿ ಮಕ್ಕಳ ದಾಖಲಾತಿಗೆ ಆಧಾರ್ ಕಾರ್ಡ್ ಅಗತ್ಯವೆಂದು ನಿಯಮ ರೂಪಿಸಿದರೆ, ಪೋಷಕರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈಗಾಗಲೇ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಸೆಪ್ಟೆಂಬರ್ 5, 2018ರ ಪ್ರಕಟನೆಯಲ್ಲಿ ತಿಳಿಸಲಾಗಿತ್ತು. ಇದೀಗ ಮತ್ತೇ ಈ ಬಗ್ಗೆ ಜನರಿಗೆ ಮಾಹಿತಿ ಸ್ಪಷ್ಟ ಪಡಿಸಲಾಗಿದೆ.
ಇನ್ನು ಆಧಾರ್ ದಾಖಲಾತಿ ಮತ್ತು ನವೀಕರಣ ನಿಯಮಾವಳಿಗಳ ನಿಯಮ 12A ಪ್ರಕಾರ, ಇನ್ನೂ ಆಧಾರ್ ಸಂಖ್ಯೆಯನ್ನು ನಿಗದಿಪಡಿಸದ ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ ಲಭ್ಯವಾಗುವಂತೆ ಮಾಡುವುದು ಮತ್ತು ಇಲ್ಲದಿರುವ ಮಕ್ಕಳ ವಿವರಗಳನ್ನು ನವೀಕರಿಸುವುದು ಶಾಲೆಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಲಾಗಿದೆ.
ಇದನ್ನು ಓದಿ: CM Siddaramaiah: ಮಂಗಳೂರಿನಲ್ಲಿ ರಾಜ್ಯದ ದೊರೆ ಸಿದ್ದರಾಮಯ್ಯ ನೈತಿಕ ಪೊಲೀಸ್ ಗಿರಿ, ಸೌಜನ್ಯ ಕೇಸ್ ಕುರಿತು ಹೇಳಿಕೆ
