Gruha Lakshmi Scheme: ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರಕಾರವು ‘ಗೃಹಲಕ್ಷ್ಮಿ’ ಯೋಜನೆ ಆರಂಭಿಸಿದೆ. ಬಹು ನಿರೀಕ್ಷಿತ ಹಾಗೂ ಕಾತುರದಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಚಾಲನೆ ನೀಡುವ ಸಮಯ ಹತ್ತಿರದಲ್ಲೇ ಇದೆ.. ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಯಾವಾಗ ? ಎಲ್ಲಿ ಉದ್ಘಾಟನೆ? ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ
ಕರ್ನಾಟಕ ಸರ್ಕಾರವು ಆಗಸ್ಟ್ 27 ರಂದು ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಿದೆ. ಈ ಮೊದಲು ಗೃಹ ಲಕ್ಷ್ಮೀ ಯೋಜನೆಯನ್ನು ಆಗಸ್ಟ್ 20 ರಂದು ಪ್ರಾರಂಭಿಸಲು ಯೋಜಿಸಲಾಗಿತ್ತು. ಆದರೆ, ಈಗ ಅದನ್ನು ಆಗಸ್ಟ್ 27 ಕ್ಕೆ ಮುಂದೂಡಲಾಗಿದೆ.
ಗೃಹಲಕ್ಷಿ ಯೋಜನೆಗೆ ಚಾಲನೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K Shivakumar) ಗುರುವಾರ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಈ ವೇಳೆ ಆಗಸ್ಟ್ 27 ರಂದು ಬೆಳಗಾವಿಯಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ಗೃಹಲಕ್ಷೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಈ ಚಾಲನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna karge), ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ (Sonia gandhi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಆಹ್ವಾನಿಸಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 2,000 ರೂಪಾಯಿ ಸಿಗುತ್ತದೆ. ಸದ್ಯ ಈ ಯೋಜನೆಗೆ ವಾರ್ಷಿಕ 30 ಸಾವಿರ ಕೋಟಿ ರೂಪಾಯಿ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಅರ್ಜಿ ಸಲ್ಲಿಕೆ ಕುರಿತು ಯಾವುದೇ ಅನುಮಾನವಿದ್ದರೆ 1902 ಸಂಪರ್ಕಿಸಬಹುದಾಗಿದೆ.
