Actor Upendra: ಸ್ಯಾಂಡಲ್ ವುಡ್ ನಟ ಉಪೇಂದ್ರ (Actor Upendra) ಅವರು ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆ ಅವರ ವಿರುದ್ಧ ದೂರು ದಾಖಲಾಗಿರುವ ವಿಚಾರ ತಿಳಿದಿರುವಂತದ್ದೆ. ಇದೀಗ ನಟ ಉಪೇಂದ್ರ ತಾನು ಜಾತಿ ನಿಂದರೆ ಮಾಡಿಲ್ಲ, FIR ರದ್ದು ಮಾಡಿ ಎಂದು ಹೈಕೋರ್ಟ್ ಮೆಟಿಲೇರಿದ್ದಾರೆ.
ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಗಾದೆ ಬಳಸಲಾಗಿದೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಅಲ್ಲದೆ, ಆಕ್ಷೇಪ ವ್ಯಕ್ತವಾದ ಕೂಡಲೇ ವಿಡಿಯೋ ಡಿಲೀಟ್ ಮಾಡಿ, ಕ್ಷಮೆ ಕೋರಿದ್ದೇನೆ ಎಂದು ಉಪೇಂದ್ರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಸಮಾಜದಲ್ಲಿನ ತಾರತಮ್ಯದ ವಿರುದ್ಧ ನಾನು ಹೋರಾಡುತ್ತಿದ್ದೇನೆ.
ಪ್ರಚಾರ ಪಡೆಯಲೆಂದು ನನ್ನ ವಿರುದ್ಧ ದೂರು ದಾಖಲಿಸಲಾಗಿದೆ. ವಾಟ್ಸಾಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಎಫ್ಐಆರ್ಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಉಪೇಂದ್ರ ಹೈಕೋರ್ಟ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Viral News: ಈಕೆಯದ್ದು ವಿಶ್ವದಲ್ಲೇ ಅತ್ಯಂತ ಉದ್ದದ ಗಡ್ಡ; ಕನ್ಫ್ಯೂಸ್ ಬೇಡ, ಈತನದ್ದಲ್ಲ, ಈಕೆಯದ್ದೇ !
