Home » Ration Card: ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್ 1ರಿಂದ 10ರವರೆಗೆ ಕಾಲಾವಕಾಶ

Ration Card: ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್ 1ರಿಂದ 10ರವರೆಗೆ ಕಾಲಾವಕಾಶ

by Praveen Chennavara
1 comment
Ration Card

Ration Card:ಜನತೆಯ ಬಹುಬೇಡಿಕೆಯಿಂದಾಗಿ ಪಡಿತರ ಚೀಟಿ (Ration Card) ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನವಾಗಿತ್ತು. ಬಳಿಕ ಸೆ.23ರಂದು ಅವಕಾಶ ನೀಡಲಾಗಿತ್ತು.ಆದರೆ ಸರ್ವಸ್ ಸಮಸ್ಯೆಯ ಕಾರಣದಿಂದ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೆ ಬರಿಗೈಯಲ್ಲಿ ಮನೆಗೆ ಮರಳಿದ್ದರು.

ಹೀಗಾಗಿ ಆ.23 (ಬುಧವಾರ) ಒಂದು ದಿನ ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆ.25 ರಂದು ತುರ್ತು ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಸೇರಿಸಿದ ಅರ್ಜಿಗಳ ವಿಲೇವಾರಿ ಆಹಾರ ನೀರಿಕ್ಷಕರು ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇದೀಗ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆ.01 ರಿಂದ ಸೆ.10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಕಡಬ : ಪ್ರಾಣಿ ಬೇಟೆ ಮೂವರ ಬಂಧನ

You may also like

Leave a Comment