Home » Free Laptop For Students:ವಿದ್ಯಾರ್ಥಿಗಳೇ ಗಮನಿಸಿ, ನಿಮಗಿದೆ ಬಿಗ್ ಗುಡ್ ನ್ಯೂಸ್! ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ!

Free Laptop For Students:ವಿದ್ಯಾರ್ಥಿಗಳೇ ಗಮನಿಸಿ, ನಿಮಗಿದೆ ಬಿಗ್ ಗುಡ್ ನ್ಯೂಸ್! ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ!

1 comment
Free Laptop For Students

Free Laptop For Students:ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ (Free Laptop For Students)ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.

ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವ ಪ್ರಥಮ(First PUC)ಮತ್ತು ದ್ವಿತೀಯ ಪಿ.ಯು.ಸಿ.(Second PUC)ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯರವರು(Siddaramaiah) ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ (Free Laptop) ವಿತರಣೆಗೆ ಚಾಲನೆ ನೀಡುವಂತೆ ಇತ್ತೀಚಿಗೆ ಸೂಚನೆ ನೀಡಿದ್ದರು. ಇದೀಗ, ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದೆ.

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಸ್ವೀಕರಿಸಿ, ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‍ಟಾಪ್ ಪಡೆಯದಿರುವ ಕುರಿತಂತೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ; ಕಂದಾಯ ಇಲಾಖೆಯಲ್ಲಿ 1,700 ‘ ಗ್ರಾಮಕರಣಿಕರ ‘ ಹುದ್ದೆ!

You may also like

Leave a Comment