Home » ಸವಣೂರು : ಕೊಂಬಕೆರೆ ಹಸ್ತಾಂತರ ಕಾರ್ಯಕ್ರಮ

ಸವಣೂರು : ಕೊಂಬಕೆರೆ ಹಸ್ತಾಂತರ ಕಾರ್ಯಕ್ರಮ

by Praveen Chennavara
0 comments

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಕಡಬ ತಾಲೂಕಿನ ಸವಣೂರು ಕೊಂಬ ಕೆರೆಯನ್ನು “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನ ಗೊಳಿಸಲಾಗಿದ್ದು ಇದರ ಹಸ್ತಾಂತರ ಕಾರ್ಯಕ್ರಮ ಸೆ.1ರಂದು ನಡೆಯಿತು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಅವರು ನಾಮಫಲಕ ಅನಾವರಣ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾಮಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಬಿ.ಎಸ್ ಸುಂದರಿಯವರು ಕೆರೆಗೆ ಬಾಗಿನ ಅರ್ಪಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಕೆರೆ ಹಸ್ತಾಂತರ ಮಾಡಿದರು.

ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ಗಿರಿಶಂಕರ ಸುಲಾಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ,ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ,ನಿಕಟ ಪೂರ್ವ ಅಧ್ಯಕ್ಷೆ ರಾಜೀವಿ ಶೆಟ್ಟಿ ,ನಿಕಟ ಪೂರ್ವ ಉಪಾಧ್ಯಕ್ಷ ಶೀನಪ್ಪ ಶೆಟ್ಟಿ,ಕಡಬ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸಂತೋಷ್‌ ಕೆ, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ,ಸವಣೂರು ಗ್ರಾ.ಪಂ.ಪಿಡಿಓ ಕಮಲರಾಜ್ ,ಲೆಕ್ಕಸಹಾಯಕ ಮನ್ಮಥ, ಯೋಜನೆಯ ಧರ್ಮಸ್ಥಳ ಯೋಜನೆಯ ಇಂಜಿನಿಯರ್ ಭರತ್‌,ಪುತ್ತೂರು ರೋಟರಿ ಕ್ಲಬ್‌ ಮಾಜಿ ಅಧ್ಯಕ್ಷ ಶರತ್‌ ಕುಮಾರ್‌, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯ ರಾಕೇಶ್‌ ರೈ ಕೆಡೆಂಜಿ,ಕೆರೆ ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷ ನಾರಾಯಣ ಗೌಡ ಪೂವ, ಕೆರೆ ಸಮಿತಿಯ ಸದಸ್ಯರಾದ
ರಝಾಕ್‌,ಮೋನಪ್ಪ ನಾಯ್ಕ, ಕೊರಗಪ್ಪ ಗೌಡ,ಬಾಬು ಎನ್‌, ಧರ್ಮಸ್ಥಳ ಯೋಜನೆಯ ಕೃಷಿ ಅಧಿಕಾರಿ ಸೋಮೇಶ್ ,ಪ್ರಸನ್ನ ರೈ ಕಲಾಯಿ , ಸವಣೂರು ವಲಯ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಗೌಡ ಮೊದಲಾದವರು ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಪ್ರಸ್ತಾಪಿಸಿ ಸ್ವಾಗತಿಸಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಕಾರ್ಯಕ್ರಮ ನಿರೂಪಿಸಿ ಸವಣೂರು ವಲಯ ಮೇಲ್ವಿಚಾರಕಿ ಹರ್ಷ ಕುಮಾರಿ ವಂದಿಸಿದರು.

You may also like

Leave a Comment