Home » Shakthi Yojana: ಶಕ್ತಿ ಯೋಜನೆ ಎಫೆಕ್ಟ್: ಸಾರಿಗೆ ನೌಕರರಿಗೆ ಬಂಪರ್ ಭಾಗ್ಯ ಘೋಷಿಸಿದ ಸರ್ಕಾರ- ಸಚಿವರಿಂದ ಮಹತ್ವದ ಘೋಷಣೆ

Shakthi Yojana: ಶಕ್ತಿ ಯೋಜನೆ ಎಫೆಕ್ಟ್: ಸಾರಿಗೆ ನೌಕರರಿಗೆ ಬಂಪರ್ ಭಾಗ್ಯ ಘೋಷಿಸಿದ ಸರ್ಕಾರ- ಸಚಿವರಿಂದ ಮಹತ್ವದ ಘೋಷಣೆ

0 comments

Ramalinga Reddy: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.ಶಾಂತಿನಗರದ ಬಿಎಂಟಿಸಿ (BMTC) ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಮಹತ್ವದ ಮಾಹಿತಿ ನೀಡಿದ್ದಾರೆ. ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.

ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಕಳುಹಿಸಲಾಗಿದೆ. ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ನೀಡಲಾಗಿದ್ದು, ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ ಎಂಬ ಮಾಹಿತಿಯನ್ನೂ ಸಚಿವರು ನೀಡಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡು ಇಲ್ಲವೇ ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ನೀಡಲಾಗುತ್ತದೆ.

ಟೂರಿಸ್ಟ್ ಮತ್ತು ಕಂಟ್ರಾಕ್ಟ್ ಕ್ಯಾರೇಜು ಬಸ್ಸುಗಳಿಗೆ ರಸ್ತೆ ತೆರಿಗೆ ಕಡಿತಗೊಳಿಸಲು ಮುಖ್ಯಮಂತ್ರಿಗಳು(CM Siddaramaiah) ನಿರ್ಣಯ ಕೈಗೊಳ್ಳಲಿದ್ದಾರೆ. ಟ್ಯಾಕ್ಸಿ, ಮ್ಯಾಕ್ಸಿ ಹಾಗೂ ಒಪ್ಪಂದ ವಾಹನಗಳಿಗೆ ವಿಶೇಷ ರಹದಾರಿ ನೀಡುವ ಬಗ್ಗೆ ವ್ಯವಸ್ಥೆ ಮಾಡಲಾಗುವ ಭರವಸೆಯನ್ನು ಸಚಿವರು ನೀಡಿದ್ದಾರೆ.ಇನ್ನು ಸಾರಿಗೆ ಅಭಿವೃದ್ದಿ ನಿಗಮ ಸ್ಥಾಪನೆಗೆ ಮನವಿ ಮಾಡಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲು ಚಿಂತನೆ ನಡೆದಿದೆ.

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರೊಂದಿಗೆ ಮಾತುಕತೆ ನಡೆದಿದ್ದು, ಇ-ಆಟೋಗಳಿಗೆ ರಹದಾರಿ ಕುರಿತು ಪತ್ರ ಬರೆಯಲಾಗಿದೆ. ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಕೋರಿ ಮನವಿ ಮಾಡಿದ್ದಾರೆ. ಆದರೆ, ಹಣಕಾಸಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ಈ ಕುರಿತು ನಿರ್ಣಯ ಕೈಗೊಳ್ಳುತ್ತಾರೆ. ತೆರಿಗೆ ವಿನಾಯಿತಿ ನೀಡಿದರೆ ಬೇರೆ ರಾಜ್ಯದಲ್ಲೂ ನೀಡಬೇಕಾಗುತ್ತದೆ. ಶಕ್ತಿ ಯೋಜನೆಗೆ ಖಾಸಗಿ ವಾಹನಗಳ ಬಳಕೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುತ್ತದೆ.

ಇದನ್ನೂ ಓದಿ: Actress Ramya: ಮೋಹಕತಾರೆ ನಟಿ ರಮ್ಯಾಗೆ ಹೃದಯಾಘಾತ ?!! ಏನಿದು ಶಾಕಿಂಗ್ ನ್ಯೂಸ್?

You may also like

Leave a Comment