Cauvery Dispute Issue: ತಮಿಳುನಾಡಿಗೆ ಕಾವೇರಿ ನೀರು(Cauvery Dispute Issue)ಹರಿಸುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ರಾಜಧಾನಿ ಬೆಂಗಳೂರು ಬಂದ್ ಗೆ (Bengaluru Band)ಕರೆ ನೀಡಿದ್ದವು. ಈ ನಡುವೆ, ರಾಜ್ಯಾದ್ಯಾಂತ 29.09.23ರಂದು ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
ಕಳೆದ ಮಂಗಳವಾರ ಹೊಸ ದಿಲ್ಲಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ಪ್ರತಿ ದಿನ 3 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಹೇಳಿದೆ. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ಅವಧಿಯಲ್ಲಿ ಪ್ರತಿ ದಿನ 3 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಆದೇಶ ಕೂಡ ಹೊರಡಿಸಿತ್ತು. ಈ ನಡುವೆ, ಸೆಪ್ಟೆಂಬರ್ 26 ಮಂಗಳವಾರದಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ಪ್ರತಿ ದಿನ 3 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ಹೊರಡಿಸಿತ್ತು. ಇದೀಗ ಸೆಪ್ಟೆಂಬರ್ 29 ಶುಕ್ರವಾರದಂದು ಅಂದರೆ ಇಂದು ಕೂಡ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ತಮಿಳುನಾಡು ಸರ್ಕಾರ ಈ ಸಭೆಯ ಸಂದರ್ಭ ಪ್ರತಿ ದಿನ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಆದೇಶಿಸಲು ಪ್ರಾಧಿಕಾರಕ್ಕೆ ಒತ್ತಾಯ ಮಾಡಲು ಮುಂದಾಗಿದೆ.
ಕಾವೇರಿ ನದಿಯಿಂದ ಮತ್ತೆ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಒತ್ತಾಯ ಮಾಡುವುದಾಗಿ ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದುರೈಮುರುಗನ್ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಕುರಿತು ಹೇಳಿಕೆ ನೀಡಿರುವ ದುರೈಮುರುಗನ್, ಕರ್ನಾಟಕಕ್ಕೆ ನೀರು ಬಿಡುವಂತೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸುವುದಾಗಿ ತಿಳಿಸಿದೆ.
ಇದನ್ನು ಓದಿ: ಪುತ್ತೂರು : ಕಾಂಗ್ರೆಸ್ ಮುಖಂಡನ ಮನೆ ದರೋಡೆ ಪ್ರಕರಣ , ಆರು ಮಂದಿಯ ಬಂಧನ
