PM Narendra Modi: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ತಯಾರಿ ನಡೆಸುತ್ತಿವೆ. ಈ ನಡುವೆ,ಛತ್ತೀಸ್‌ಗಢದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ(Election) ಭಾರತೀಯ ಜನತಾ ಪಕ್ಷ ಪೂರ್ವ ಸಿದ್ದತೆ ಮಾಡಿಕೊಳ್ಳುತ್ತಿದ್ದು ಭರ್ಜರಿ ಮತ ಬೇಟೆಗೆ ಮುಂದಾಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ(PM Narendra Modi) ಛತ್ತೀಸ್‌ಗಢ ಜಗಲ್‌ಪುರದ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ 26 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರ ಜೊತೆಗೆ ತಾರೋಕಿ ಮತ್ತು ರಾಯ್‌ಪುರ ನಡುವೆ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಇದಾದ ನಂತರ, ಜಗದಲ್ಪುರ್ ನಲ್ಲಿ ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಛತ್ತೀಸ್‌ಗಢ ಭಾರತದ ಭವಿಷ್ಯವನ್ನು ಬದಲಾಯಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟಿರುವ ಮೋದಿ ಇಂದು ಉದ್ಘಾಟನೆಗೊಂಡ ಮತ್ತು ಶಂಕುಸ್ಥಾಪನೆ ಮಾಡಿದ ಯೋಜನೆಗಳು ಛತ್ತೀಸ್‌ಗಢದ ಪ್ರಗತಿಯ ವೇಗವನ್ನು ಹೆಚ್ಚಿಸಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡುತ್ತವೆ. ಇದು ಹೊಸ ಉದ್ಯಮಗಳನ್ನು ಪ್ರೋತ್ಸಾಹಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಛತ್ತೀಸ್‌ಗಢದಲ್ಲಿ ಅಪರಾಧ ಉತ್ತುಂಗದಲ್ಲಿದ್ದು, ಕೊಲೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಇದು ಕೂಡ ಒಂದಾಗಿದ್ದು, ಅಷ್ಟೇ ಅಲ್ಲದೇ, ಭ್ರಷ್ಟಾಚಾರ ಕೂಡ ಎಲ್ಲೆಡೆ ಹರಡಿದೆ ಎಂದು ಮೋದಿ ಹೇಳಿದ್ದಾರೆ. ಛತ್ತೀಸ್‌ಗಢಕ್ಕೆ ಕಾಂಗ್ರೆಸ್ ಏನಾದರೂ ನೀಡಿದೆ ಎಂದಾದರೆ ಅದು ಕೇವಲ ಸುಳ್ಳು ಪ್ರಚಾರ ಮತ್ತು ಹಗರಣ ಆಧಾರಿತ ಸರ್ಕಾರ ಎಂದು ಪ್ರಧಾನಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸುಳ್ಳು ಪ್ರಚಾರದ ನೆಪದಲ್ಲಿ ಜನರಿಗೆ ಮೋಸ ಮಾಡುವ ಪ್ರಯತ್ನ ನಡೆಸುತ್ತಿದ್ದು, ಈ ಮೂಲಕ ಕಾಂಗ್ರೆಸ್ ಕೇವಲ ಭ್ರಷ್ಟಾಚಾರದಲ್ಲಿಯೇ ತೊಡಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನು ಓದಿ: Viral video: ಲೋ ಮಗನೇ.. ಯಾವಳೋ ಈ ಹುಡುಗಿ ?! ಫೇವರಿಟ್ ಹಿರೋಯಿನ್ ಜೊತೆ ಲೈವ್ ಮಾಡುವಾಗ್ಲೇ ಮಗನಿಗೆ ಕಪಾಳಮೋಕ್ಷ ಮಾಡಿದ ತಾಯಿ !
