Gruha Lakshmi Scheme: ಕಾಂಗ್ರೆಸ್ ಸರ್ಕಾರದ(Congress Party)ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Yojana latest Updates)ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರ ಚಾಲನೆ ನೀಡಿದ್ದು,ಈಗಾಗಲೇ ಮಹಿಳೆಯರ ಖಾತೆಗೆ 2000 ರೂ. ಹಣ ಜಮೆ ಪ್ರಕ್ರಿಯೆ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ (Gruha Lakshmi Scheme) ಖಾತೆಗೆ ಹಣ ಜಮಾಯಾಗದ ಮನೆಯ ಯಜಮಾನಿಯರಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಸಿಹಿಸುದ್ದಿ ನೀಡಿದ್ದು, ತಾಂತ್ರಿಕ ಸಮಸ್ಯೆ ಸರಿಪಡಿಸಿ ಹಣ ವರ್ಗಾವಣೆಯಾಗದ ಮಹಿಳೆಯರಿಗೆ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.
ಸಿದ್ದರಾಮಯ್ಯನವರು ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ 1.26 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ಸಮಸ್ಯೆಯಿಂದ ಹಣ ಜಮೆ ಆಗಿರುವುದಿಲ್ಲ. ಶೀಘ್ರವೇ 16 ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
