Home » Primary school teachers recruitment: 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಈ ದಿನವೇ ಕೈ ಸೇರಲಿದೆ ಆದೇಶ ಪ್ರತಿ

Primary school teachers recruitment: 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಈ ದಿನವೇ ಕೈ ಸೇರಲಿದೆ ಆದೇಶ ಪ್ರತಿ

0 comments

Primary school teachers recruitment: 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ(Primary school teachers recruitment) ಹೈಕೋರ್ಟ್ (High court) ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೌದು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿ ಮಾ.8, 2023 ರ ಆಯ್ಕೆ ಪಟ್ಟಿಯಂತೆ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಸೂಚಿಸಿದೆ.

6 ರಿಂದ 8 ನೇ ತರಗತಿಗಳಿಗೆ ಶಿಕ್ಷಕರ ಕೊರತೆ ಇರುವುದನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರ ಆಯ್ಕೆ ಅಂತಿಮವಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ. ನೊಂದ ಅಭ್ಯರ್ಥಿಗಳು ಕೆಎಟಿಯಲ್ಲಿ ದಾವೆ ಹೂಡಬಹುದಾಗಿದೆ. ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಿಕೆ ಆಗಿರುತ್ತದೆ.

ಜೂನ್ 8, 2023 ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳ ಬದಲಾವಣೆ ಆಗಿದೆ. ಹೊಸ ನೀತಿಯಲ್ಲಿ 451 ಅಭ್ಯರ್ಥಿಗಳಿಗೆ ಬದಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕೆಎಟಿ ಆದೇಶದ ಬಳಿಕ ಬದಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಹಿಂದುಳಿದ ವರ್ಗದಲ್ಲಿ ಪರಿಗಣಿಸುವಾಗ ವಿವಾಹಿತ ಮಹಿಳೆಯರಿಗೆ ಪತಿಯ ಆದಾಯ ಪರಿಗಣನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ನಿಯಮ ಅನ್ವಯಿಸಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕ ಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಭ್ಯರ್ಥಿಯ ತಂದೆಯ ಜಾತಿ, ಆದಾಯ ಪ್ರಮಾಣ ಪತ್ರ ಆಧರಿಸಲು ಸೂಚಿಸಿತ್ತು. ಇದೀಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯಪೀಠ ರದ್ದುಗೊಳಿಸಿದೆ ಎನ್ನಲಾಗಿದೆ.

You may also like

Leave a Comment