4
Liquor Sale: ದಸರಾ ಆಚರಣೆ ಹಿನ್ನಲೆಯಲ್ಲಿ ಮಡಿಕೇರಿ ನಗರದ ಹಲವು ಕಡೆ ಅ.24 ರ ಬೆಳಗ್ಗೆ 6 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮದ್ಯ ಮಾರಾಟ( Liquor Sale) ನಿಷೇಧ ಮಾಡಲಾಗಿದೆ.
ಸಾರ್ವಜನಿಕ ಹಿತಾಸಕ್ತಿ ಕಾರಣದಿಂದ ದಸರಾ ಆಚರಣೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅ.24 ರ ಬೆಳಗ್ಗೆ 6 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ ಸುತ್ತಮುತ್ತ 10ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಗೋಣಿಕೊಪ್ಪ, ಪೊನ್ನಂಪೇಟೆ ಠಾಣಾ ಸರಹದ್ದಿನ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಅವರು ಆದೇಶ ನೀಡಿದ್ದಾರೆ.
