Home » Namaz in School: ಯೋಗಿ ನಾಡಲ್ಲಿ ಸರಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ನಮಾಜ್‌!!!

Namaz in School: ಯೋಗಿ ನಾಡಲ್ಲಿ ಸರಕಾರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ನಮಾಜ್‌!!!

by Mallika
0 comments

Namaz Offered In UP School: ಎಲ್ಲರಿಗೂ ಗೊತ್ತಿರುವ ಹಾಗೆ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧ ಮಾಡಲಾಗಿದೆ. ಆದರೆ ಇಲ್ಲೊಂದು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್‌ ಮಾಡಿದ್ದಾರೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಠಾಕೂರ್‌ ಗಂಜ್‌ ಪ್ರದೇಶದ ನೇಪಿಯರ್‌ ರಸ್ತೆಯಲ್ಲಿ ಇರುವ ಶಾಲೆಯಲ್ಲಿ. ನಮಾಜ್‌ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಿಎಂ ಯೋಗಿ ಆದಿತ್ಯನಾಥ್‌ ಸಾರಥ್ಯದ ಉತ್ತರಪ್ರದೇಶದ ಸರಕಾರದಲ್ಲಿ ಇಂತಹ ಒಂದು ಘಟನೆ ನಡೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಷ್ಟುಮಾತ್ರವಲ್ಲದೇ ಇದರ ಕುರಿತು ಸಮಗ್ರ ತನಿಖೆಗೆ ಆದೇಶ ನೀಡಲಾಗಿದ್ದು, ಶಾಲೆಯ ಮುಖ್ಯಸ್ಥರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಶಾಲೆಯಲ್ಲಿ ತರಗತಿಯಲ್ಲಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್‌ ಮಾಡಲು ಅವಕಾಶ ನೀಡಿದ್ದು ಯಾರು ಎಂಬ ಕುರಿತು ತನಿಖೆ ನಡೆಯುತ್ತಿದೆ. ಈ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಬ್ಲಾಕ್ ಶಿಕ್ಷಣಾಧಿಕಾರಿಯನ್ನು ನಾಮನಿರ್ದೇಶನ ಮಾಡಲಾಗಿದೆ.

You may also like

Leave a Comment