Home » High Court: ಆಸ್ತಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್ !! ಈ ನಿಯಮಗಳಲ್ಲಿ ಬದಲಾವಣೆ !

High Court: ಆಸ್ತಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್ !! ಈ ನಿಯಮಗಳಲ್ಲಿ ಬದಲಾವಣೆ !

0 comments
High Court

High court: ಹೈಕೋರ್ಟ್ (High court) ಆಸ್ತಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಹಿಂದೂ ಉತ್ತರಾಧಿಕಾರಿ ಕಾಯಿದೆಯಡಿ ಮೃತ ಪುತ್ರನ ಆಸ್ತಿಗೆ ತಾಯಿಯು ಮೊದಲನೇ ವರ್ಗದ ವಾರಸುದಾರಳಾಗಿದ್ದು, ಕ್ಲಾಸ್ 1 ಹೇರ್ಸ್, ಪತಿ ಜೀವಂತವಾಗಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರನಿಗೆ ಸೇರಬೇಕಿರುವ ಆಸ್ತಿಯಲ್ಲಿ ತಾಯಿ ತನ್ನ ಪಾಲು ಪಡೆಯಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.

ಮೃತಪಟ್ಟಿರುವ ಪುತ್ರನ ಪಾಲಿನ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿ ಹಕ್ಕು ಹೊಂದಿಲ್ಲ ಎಂದು ಆದೇಶಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಸಾಮಾನ್ಯ ಎರಡನೇ ಮೇಲ್ಮನವಿಯನ್ನು ಏಕಸದಸ್ಯ ಪೀಠವು ಪುರಸ್ಕರಿಸಿದೆ. ವಿಪರ್ಯಾಸವೆಂದರೆ, ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಮಹಿಳೆ ಅವರೂ ವಿಧಿವಶರಾಗಿದ್ದರು.

ಹಿಂದೂ ಮಹಿಳೆಗೆ ಸಂಬಂಧಿಸಿದ ಸಾಮಾನ್ಯ ಉತ್ತರಾಧಿಕಾರ ನಿಯಮಗಳ ಪ್ರಕಾರ, ಹಿಂದೂ ಮಹಿಳೆಯ ಆಸ್ತಿಯು ಪುತ್ರರು, ಪುತ್ರಿಯರು ಹಿಂದೆ ಸಾವನ್ನಪ್ಪಿರುವ ಪುತ್ರ ಅಥವಾ ಪುತ್ರಿಯ ಮಕ್ಕಳು ಸೇರಿ) ಮತ್ತು ಪತಿಗೆ ವಿಭಾಗವಾಗುತ್ತದೆ. ಹೀಗಾಗಿ, ಮಹಿಳೆಯ ಆಸ್ತಿಯು ಪುತ್ರ, ಪುತ್ರಿ ಮತ್ತು ಪತಿಗೆ ವಿಭಾಗವಾಗುತ್ತದೆ ಎಂದಿರುವ ಹೈಕೋರ್ಟ್‌ ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ಮಾರ್ಪಾಡು ಮಾಡಿ ಆಸ್ತಿ ಹಂಚಿಕೆ ಮಾಡಿದೆ.

ವಾಸ್ತವಿಕ ಅಂಶಗಳು ಮತ್ತು ಕಾನೂನಿನ ನಿಬಂಧನೆಗಳನ್ನು ಆಳವಾಗಿ ವಿಶ್ಲೇಷಿಸಿರುವ ಹೈಕೋರ್ಟ್, ಮಹಿಳೆ ಮಗನ ಅವರ ಮೊದಲನೇ ವರ್ಗದ ವಾರಸುದಾರರಾಗಿದ್ದು, ಅವರು ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕುದಾರರಾಗಿದ್ದಾರೆ. ಪ್ರಕರಣದ ವಿಚಾರಣೆಯ ಹಂತದಲ್ಲಿ ಮಹಿಳೆ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಹಿಂದೂ ಮಹಿಳೆಯ ಉತ್ತರಾಧಿಕಾರ ನಿಯಮಗಳ ಬಗ್ಗೆ ಚರ್ಚಿಸುವ ಹಿಂದೂ ಉತ್ತರಾಧಿಕಾರ ಕಾಯಿದೆಯ ಅನ್ವಯಿಸಬೇಕಿದೆ ಎಂದಿದೆ.

You may also like

Leave a Comment