Post office: ಆಧಾರ್ ಲಿಂಕ್ (Aadhaar Link) ಕುರಿತು ಪೋಸ್ಟ್ ಆಫೀಸ್ (Post office) ಮಹತ್ವದ ಮಾಹಿತಿ ಹೊರಡಿಸಿದೆ. ಅಂಚೆ ಕಚೇರಿ ಸಣ್ಣ ಉಳಿತಾಯ ಖಾತೆಗೆ ಆಧಾರ್ ಹಾಗೂ ಮೊಬೈಲ್ ಸಂಖ್ಯೆಯನ್ನು ಒಂದು ತಿಂಗಳೊಳಗೆ ಲಿಂಕ್ ಮಾಡುವಂತೆ ಅಂಚೆ ಇಲಾಖೆ ಗ್ರಾಹಕರಲ್ಲಿ ತಿಳಿಸಿದೆ. ಮಾಡದಿದ್ದರೆ ಖಾತೆಯಿಂದ ಯಾವುದೇ ವಹಿವಾಟು ನಡೆಸಲು ಸಾಧ್ಯವಾಗೋದಿಲ್ಲ ಎನ್ನಲಾಗಿದೆ.
ಈಗಾಗಲೇ ಖಾತೆ ಹೊಂದಿರೋರು ಈ ತನಕ ಆಧಾರ್ ಸಂಖ್ಯೆಯನ್ನು ಅಂಚೆ ಕಚೇರಿಗೆ ನೀಡದಿದ್ದರೆ ಅಂಥವರು 2023ರ ಏಪ್ರಿಲ್ 1ರಿಂದ 6 ತಿಂಗಳೊಳಗೆ ನೀಡುವಂತೆ ತಿಳಿಸಲಾಗಿತ್ತು. ನಿಗದಿತ ಕಾಲಾವಧಿಯೊಳಗೆ ಈ ಕೆಲಸ ಮಾಡಲು ವಿಫಲರಾದರೆ ಅಂಥ ಖಾತೆಗಳು ನಿಷ್ಕ್ರಿಯಗೊಳ್ಳುತ್ತವೆ ಎಂದು ತಿಳಿಸಲಾಗಿತ್ತು.
ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ ಎಸ್ ವೈ), ಅಂಚೆ ಕಚೇರಿ ಉಳಿತಾಯ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ (ಎಸ್ ಸಿಎಸ್ ಎಸ್) ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಸೆಪ್ಟೆಂಬರ್ 31 ಅಂತಿಮ ಗಡುವಾಗಿತ್ತು. ಹಾಗೆಯೇ ಈಗಾಗಲೇ ಸಣ್ಣ ಉಳಿತಾಯ ಯೋಜನೆಗಳಲ್ಲಿ ಖಾತೆ ಹೊಂದಿದ್ದು, ಆಧಾರ್ ಸಂಖ್ಯೆ ಒದಗಿಸಲು ವಿಫಲರಾಗಿರೋರ ಖಾತೆಯನ್ನು 2023ರ ಅಕ್ಟೋಬರ್ 1ರಿಂದ ಫ್ರೀಜ್ ಮಾಡಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಹೀಗಾಗಿ ಅವಧಿ ಮುಗಿದಿದ್ದರೂ ಅಂಚೆ ಇಲಾಖೆ ಸಣ್ಣ ಉಳಿತಾಯ ಖಾತೆಗೆ ಆಧಾರ್ ಹಾಗೂ ಮೊಬೈಲ್ ಸಂಖ್ಯೆಯನ್ನು ಒಂದು ತಿಂಗಳೊಳಗೆ ಲಿಂಕ್ ಮಾಡುವಂತೆ ಗ್ರಾಹಕರಲ್ಲಿ ಮನವಿ ಮಾಡಿದೆ.
ಅಂಚೆ ಕಚೇರಿ ಗೆ ಆಧಾರ್ ಸಂಖ್ಯೆ ಸಲ್ಲಿಕೆ ಮಾಡದಿದ್ರೆ ಪಿಪಿಎಫ್, ಎನ್ ಎಸ್ ಸಿ ಅಥವಾ ಎಸ್ ಸಿಎಸ್ ಎಸ್ ಸೇರಿದಂತೆ ಸಣ್ಣ ಉಳಿತಾಯ ಖಾತೆಗಳು ನಿಷ್ಕ್ರಿಯಗೊಳ್ಳುತ್ತವೆ. ಆಗ ಸಣ್ಣ ಉಳಿತಾಯ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ಪ್ರಯೋಜನಗಳು ಸಿಗೋದಿಲ್ಲ. ಈ ಉಳಿತಾಯ ಯೋಜನೆಗಳ ಮೇಲೆ ಸಾಲ ತೆಗೆಯಲು ಹಾಗೂ ಅವಧಿಪೂರ್ಣ ವಿತ್ ಡ್ರಾ ಮಾಡಲು ಕೂಡ ಸಾಧ್ಯವಾಗೋದಿಲ್ಲ. ಬಾಕಿಯಿರುವ ಬಡ್ಡಿ ಕೂಡ ನಿಮ್ಮ ಖಾತೆಗೆ ಕ್ರೆಡಿಟ್ ಆಗೋದಿಲ್ಲ.
ಇದನ್ನೂ ಓದಿ: Ration Card: ನಿಮ್ಮ ರೇಷನ್ ಕಾರ್ಡ್ ಚಾಲನೆಯಲ್ಲಿದೆಯಾ ?! ಈ ಕೂಡಲೇ ಚೆಕ್ ಮಾಡಿ
