5
Ration Card: ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸದ್ಯ ಪ್ರಧಾನಿ ಮೋದಿ ಪಡಿತರ ವಿತರಣೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.
ಕೇಂದ್ರದ (Central Government)ಉಚಿತ ಪಡಿತರ ಯೋಜನೆಯನ್ನು(Ration Card) ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗುವ ಕುರಿತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾಹಿತಿ ನೀಡಿದ್ದಾರೆ. ಛತ್ತೀಸ್ ಗಢದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಉಚಿತ ಪಡಿತರ ವಿಸ್ತರಣೆ ಮಾಡುವ ಕುರಿತು ಮಾಹಿತಿ ನೀಡಿದ್ದು,80 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.
