2
Amit Shah: ಬಿಹಾರದ ಜಾತಿಗಣತಿಯ ಫಲಿತಾಂಶಗಳ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅಸಮಾಧಾನ ಹೊರಹಾಕಿದ್ದು, ನಿತೀಶ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ ಸಮೀಕ್ಷೆಯನ್ನು ನೆಪದಂತೆ ಬಳಸಿಕೊಂಡು ಉದ್ದೇಶಪೂರ್ವಕವಾಗಿ ಮುಸ್ಲಿಮರು ಮತ್ತು ಯಾದವರ ಜನಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಅಮಿತ್ ಶಾ ಆರೋಪ ಮಾಡಿದ್ದಾರೆ.
ನಿತೀಶ್ ಕುಮಾರ್ ಎನ್ ಡಿ ಎ ಭಾಗವಾಗಿದ್ದ ಸಂದರ್ಭ ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಜಾಫರ್ ಪುರದ ಪತಾಹಿಯಲ್ಲಿ ನಡೆದ ರ್ಯಾಲಿಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷಗಳ I.N.D.I.A ಮೈತ್ರಿಕೂಟದ ವಿರುದ್ಧ ಕೂಡ ಅಮಿತ್ ಶಾ ಕಿಡಿಕಾರಿದ್ದಾರೆ. “ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ವಿರೋಧಿಸುವುದು ಮೈತ್ರಿಕೂಟದ ಏಕೈಕ ಅಜೆಂಡಾ” ಎಂದು ಆರೋಪ ಮಾಡಿದ್ದಾರೆ.
ಇದನ್ನು ಓದಿ: Health Tips: ಈ ಐದು ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ!!
