Rain holiday: ಬರದ ನಡುವೆಯೇ ವರುಣನ ಸಿಂಚನ ಶುರುವಾಗಿದೆ. ರಾಜ್ಯಾದ್ಯಂತ ಮಳೆ ಚುರುಕುಗೊಂಡಂತೆ ಕಾಣುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಅಂತಯೇ ನಮ್ಮ ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ(Tamilnadu) ಕೂಡ ಮಳೆಯ ಆರ್ಭಟ ಜೋರಾಗಿದ್ದು ಅಲ್ಲಿನ ಕೆಲವು ಶಾಲೆಗಳಿಗೆ ರಜೆಯನ್ನು(Rain holiday)ನೀಡಲಾಗಿದೆ.
ಹೌದು, ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಅಲ್ಲಿನ ಮಧುರೈ, ಥೇಣಿ, ದಿಂಡಿಗಲ್, ತಿರುನಲ್ವೇಲಿ, ತೆಂಕಶಿ, ತಿರುಪ್ಪರ್ ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲದೆ ನೀಲಗಿರಿ ಜಿಲ್ಲೆಯ ನಾಲ್ಕು ತಾಲೂಕುಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದೆಯೂ ಕೂಡ ವರುಣಾರ್ಭಟ ಜೋರಾಗಲಿದೆ ಎಂದ ಹವಮಾನ ಇಲಾಖೆ ತಿಳಿಸಿದೆ.
ಅಂದಹಾಗೆ ನವೆಂಬರ್ 8ರಂದು ಸಂಜೆ 5.30ಕ್ಕೆ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದ್ದು, ಈ ಮಾರುತಗಳು ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
