Home » PSI Recruitment scam: PSI ನೇಮಕಾತಿ ಹಗರಣ- ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

PSI Recruitment scam: PSI ನೇಮಕಾತಿ ಹಗರಣ- ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

1 comment
PSI Recruitment scam

PSI recruitment scam: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ ನೇಮಕಾತಿ(PSI Recruitment scam) ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಆದೇಶಿಸಿದೆ.

ಹೌದು, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ (PSI Scam) ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ (State Government) ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ (Karnataka High court) ಗ್ರೀನ್‌ ಸಿಗ್ನಲ್‌ ನೀಡಿದೆ. ಅಂದರೆ 545 ಪಿಎಸ್‌ಐಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ.

ಅಂದಹಾಗೆ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಮರು ಪರೀಕ್ಷೆಯ ಸರ್ಕಾರ ನೀಡಿದ ಆದೇಶವನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಪೀಠ ಈ ಆದೇಶ ನೀಡಿದೆ.

ಅಕ್ಟೋಬರ್‌ 26ಕ್ಕೆ ವಿಚಾರಣೆ ಪೂರ್ಣಗೊಳಿಸಿದ್ದ‌ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮರುಪರೀಕ್ಷೆಗೆ ಬಿಜೆಪಿ ಸರ್ಕಾರ 2022 ಏಪ್ರಿಲ್ 29 ರಂದು ಆದೇಶ ನೀಡಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ‌ ಅಭ್ಯರ್ಥಿಗಳು ಕೆಎಟಿ ಅರ್ಜಿ ಸಲ್ಲಿಸಿದ್ದರು. ಕೆಎಟಿ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ವಜಾಗೊಳಿಸಿತ್ತು. ಬಳಿಕ ಅಭ್ಯರ್ಥಿಗಳು ಮೇಲ್ಮನವಿ ಅರ್ಜಿಯನ್ನ ಹೈ ಕೋರ್ಟ್ ನಲ್ಲಿ ಸಲ್ಲಿಸಿದ್ದರು. ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ತನ್ನ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿದ್ದು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವಂತ ಆದೇಶ ಹೊರಡಿಸಿದೆ. ಅಲ್ಲದೇ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.

ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: Gold Purchas Rule: ದೇಶಾದ್ಯಂತ ಚಿನ್ನ ಖರೀದಿಸುವವರಿಗೆ ಹೊಸ ರೂಲ್ಸ್ !!

You may also like

Leave a Comment