Home » KEA ಇಂದ 4 ನಿಗಮಗಳಿಗೆ ಹುದ್ದೆಗಳ ಭರ್ತಿ; ಎರಡೆರಡು ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಸೂಚನೆ ಪ್ರಕಟ!

KEA ಇಂದ 4 ನಿಗಮಗಳಿಗೆ ಹುದ್ದೆಗಳ ಭರ್ತಿ; ಎರಡೆರಡು ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಸೂಚನೆ ಪ್ರಕಟ!

2 comments
KEA Exam Guidelines

KEA Exam Guidelines For Candidates: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA)ಕೈಗೊಂಡಿರುವ 4 ನಿಗಮಗಳ ನೇಮಕಾತಿಯ ಕುರಿತಂತೆ, ಇದೀಗ ಎರಡು ಪರೀಕ್ಷಾ ಕೇಂದ್ರಗಳಿಗೆ (KEA Exam Guidelines For Candidates)ಸಂಬಂಧಿಸಿದ ಸೂಚನೆಗಳನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪರೀಕ್ಷೆಗಳನ್ನು ನಡೆಸುತ್ತಿದೆ.

ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ದಿನಾಂಕ 18-11-2023 ರಿಂದ 25-11-2023 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ಸಂಬಂಧಿಸಿದ ವಿಶೇಷ ಸೂಚನೆ ಬಿಡುಗಡೆ ಮಾಡಿದ್ದು, ಸದರಿ ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಈಗಾಗಲೇ ಲಿಂಕ್‌ ಅನ್ನು ಪ್ರಕಟಿಸಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಹಿನ್ನೆಲೆ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆ ಆಗಲಿದ್ದು, ಈ ಹಿನ್ನೆಲೆಯಲ್ಲಿ ಕೆಇಎ ಸೂಚನೆ ನೀಡಿದೆ.

ಅಭ್ಯರ್ಥಿಗಳು ಕೆಇಎ ಪರೀಕ್ಷೆಗೆ ಹಾಜರಾಗುವ ಸಂದರ್ಭ ಪ್ರವೇಶ ಪತ್ರದ ಜೊತೆಗೆ ಅಧಿಕೃತ ಸರ್ಕಾರಿ ಗುರುತಿನ ಚೀಟಿ ಒಯ್ಯಬೇಕು. ಇದರ ಜೊತೆಗೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿದೆ. ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ. ಪರೀಕ್ಷಾ ದಿನದಂದು ಎರಡು ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದ ಜನತೆಗೆ ಸಿಹಿ ಸುದ್ದಿ- ಇನ್ಮುಂದೆ ‘ಜನನ-ಮರಣ’ ನೋಂದಣಿ ಭಾರೀ ಸುಲಭ !! ಇವರಿಗೆ ಮಾತ್ರ ವಿತರಿಸುವ ಅವಕಾಶ !!

You may also like

Leave a Comment