Home » D K Shivkumar: ಬ್ಲೂ ಫಿಲಂ ಪ್ರದರ್ಶನ ಆರೋಪದ ಕುರಿತು ಮಹತ್ವದ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್!!

D K Shivkumar: ಬ್ಲೂ ಫಿಲಂ ಪ್ರದರ್ಶನ ಆರೋಪದ ಕುರಿತು ಮಹತ್ವದ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್!!

1 comment
D K Shivkumar

D K Shivkumar: ಡಿ ಕೆ ಶಿವಕುಮಾರ್ ಅವರು ರಾಜಕೀಯಕ್ಕೆ ಬರುವ ಮೊದಲು ನೀಲಿ ಚಿತ್ರ ಪ್ರದರ್ಶನ ಮಾಡುತ್ತಿದ್ದರು ಎಂದು ಆರೋಪ ಮಾಡುತ್ತಿದ್ದು ಈ ಕುರಿತು ಇದೀಗ ಸ್ವತಃ ಡಿ ಕೆ ಶಿವಕುಮಾರ್(D K Shivkumar) ಅವರೇ ಮೌನ ಮುರಿದಿದ್ದು ಅಂತಹ ಕೆಲಸ ಮಾಡಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಹೌದು, ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಹುಟ್ಟೂರು ದೊಡ್ಡ ಆಲಹಳ್ಳಿ ಸುತ್ತಮುತ್ತ ಯಾವನಾದರೂ ಒಬ್ಬ ನಾನು ಬ್ಲೂ ಫಿಲಂ ಪ್ರದರ್ಶನ ಮಾಡುತ್ತಿದ್ದೆ ಎಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ ಈ ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಇಷ್ಟೇ ಅಲ್ಲದೆ ದೊಡ್ಡಆಲಹಳ್ಳಿ, ಹಾರೋಬೆಲೆ, ಕೋಡಿಹಳ್ಳಿಗಳಲ್ಲಿ ನಡೆಸುತ್ತಿದ್ದೆ. ಹುಣಸೇಹಳ್ಳಿಯಲ್ಲಿ ಈಗಲೂ ಟೆಂಟ್ ಇದೆ. ಈ ಊರುಗಳಿಗೆ ಹೋಗಿ ಮಾಧ್ಯಮದವರೇ ಸಮೀಕ್ಷೆ ನಡೆಸಿ, ನಾನು ಯಾವ ಚಿತ್ರಗಳ ಪ್ರದರ್ಶನ ಮಾಡಿಸುತ್ತಿದ್ದೆ ಎಂದು ಜನರ ಬಳಿ ಕೇಳಿ. ಕುಮಾರಸ್ವಾಮಿ ಅವರಿಗೆ ನೀವೇ ಉತ್ತರಿಸಿ. ಕುಮಾರಸ್ವಾಮಿ ಕನಕಪುರಕ್ಕೆ ಬರಲಿ, ಬ್ಲೂ ಫಿಲಂ ಬಗ್ಗೆ ಮಾತಾಡಲಿ. ಲೋಕಸಭೆ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದರು.

 

ಇದನ್ನು ಓದಿ: December Bank Holidays: ಡಿಸೆಂಬರ್‌ನಲ್ಲಿ ಸಾಲು ಸಾಲು ರಜೆ, ಕ್ರಿಸಮಸ್‌ ಸೇರಿ ಮುಷ್ಕರದವರೆಗೆ ಎಷ್ಟು ರಜೆ? ಕಂಪ್ಲೀಟ್‌ ವಿವರ ಇಲ್ಲಿದೆ

You may also like

Leave a Comment