Electric Supply For Pumpset: ಇಂಧನ ಸಚಿವರಾದ ಕೃಷಿ ಸಚಿವರಾದ ಕೆ.ಜೆ.ಚಾರ್ಜ್(K. J. George) ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ರೈತರಿಗೆ (Farmers)ಪಂಪ್ ಸೆಟ್ ಗಳಿಗೆ(Pump Set)5 ಗಂಟೆ ವಿದ್ಯುತ್ ಪೂರೈಸಲಾಗುತ್ತಿದ್ದು, ಅದನ್ನು ರಾಜ್ಯಾದ್ಯಂತ 7 ಗಂಟೆಗೆ ಹೆಚ್ಚಳ ಮಾಡಲಾಗುವ ಕುರಿತು ಶೀಘ್ರವೇ ನಿರ್ಣಯ ಕೈಗೊಳ್ಳುವ ಭರವಸೆ ನೀಡಿದ್ದರು. ಇದೀಗ, ರೈತರಿಗೆ ಬೇಸಿಗೆಯಲ್ಲೂ ಕೂಡ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ(Electricity supply)ಮಾಡುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾಹಿತಿ ನೀಡಿದ್ದಾರೆ.
ಕೃಷಿ ಕೊಳವೆ ಬಾವಿಗಳಿಗೆ ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ(Electric Supply For Pumpset) ಪಡೆಯವ ಕುರಿತ ಸರ್ಕಾರದ ಆದೇಶವನ್ನು ಹಿಂಪಡೆಯುವ ನಿಟ್ಟಿನಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಬೇಸಿಗೆಯಲ್ಲಿಯೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.
ನೀರಾವರಿ ಪಂಪ್ ಸೆಟ್ ಗಳಿಗೆ 4500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದ್ದು, ಮುಖ್ಯಮಂತ್ರಿಗಳ ಸೂಚನೆಯ ಅನುಸಾರ ನೀರಾವರಿ ಪಂಪ್ಲೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದ್ದಾರೆ. ಕುಸುಮ ಯೋಜನೆ ಜಾರಿಗೊಳಿಸಲು ಯೋಜನೆ ರೂಪಿಸಲಾಗುತ್ತಿದ್ದು, ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯ 2.64 ಲಕ್ಷ ಫಲಾನುಭವಿಗಳ ಬಾಕಿ ಮೊತ್ತ 389.66 ಕೋಟಿ ರೂ. ವಿದ್ಯುತ್ ಶುಲ್ಕ ಮನ್ನ ಮಾಡಲಾಗಿದೆ. ಇವರನ್ನು ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆಗೆ ಸೇರ್ಪಡೆ ಮಾಡಲಾಗಿರುವ ಕುರಿತು ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: High Court : ಮುರುಘಾ ಶ್ರೀ ಕೇಸ್ ಕುರಿತು ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್ !!
