Home » Murder Case: ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪಿದ 31ರ ಗೃಹಿಣಿ – ಮರಣೋತ್ತರ ಪರೀಕ್ಷೆ ವೇಳೆ ಬಯಲಾಯ್ತು ಅಚ್ಚರಿ ಸತ್ಯ

Murder Case: ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪಿದ 31ರ ಗೃಹಿಣಿ – ಮರಣೋತ್ತರ ಪರೀಕ್ಷೆ ವೇಳೆ ಬಯಲಾಯ್ತು ಅಚ್ಚರಿ ಸತ್ಯ

1 comment
Murder Case

Murder Case: ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ(Death)ಘಟನೆ ವರದಿಯಾಗಿದೆ.

ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ದೈವಿಯನ್ನು ಶ್ವೇತಾ (31) ಎಂದು ಗುರುತಿಸಲಾಗಿದೆ. ಈ ನಡುವೆ ಶ್ವೇತಾ ಅವರ ಪೋಷಕರು ಪತಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ದರ್ಶನ್ ತನ್ನ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ಶ್ವೇತಾ ಪೋಷಕರಿಗೆ ತಿಳಿಸಿದ್ದನಂತೆ. ಅಷ್ಟೇ ಅಲ್ಲದೆ, ಆಕೆಯ ಪೋಷಕರು ಬರುವ ಮೊದಲೇ ಅಂತ್ಯಕ್ರಿಯೆಗೆ ತಯಾರಿ ತರಾತುರಿಯಲ್ಲಿ ಸಿದ್ಧತೆ ನಡೆಸಿದ್ದ. ಹೀಗಾಗಿ, ಶ್ವೇತಾ ಪೋಷಕರು ಪತಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ದರ್ಶನ್‌ ಮೂರು ವರ್ಷಗಳ ಹಿಂದೆಯಷ್ಟೇ ಶ್ವೇತಾಳೊಂದಿಗೆ ಮದುವೆ ಆಗಿದ್ದನಂತೆ. ಈ ನಡುವೆ, ಬೇರೆಯವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿಚಾರ ಪತ್ನಿಗೆ ಗೊತ್ತಾಗಿದೆ. ಪತಿಯ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ಪತ್ನಿಗೆ ಪಾಯಿಸನ್ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸದ್ಯ, ವರದಿ ಸಿಕ್ಕ ಬಳಿಕ ನಿಜಾಂಶ ಹೊರ ಬೀಳಲಿದೆ.

ಇದನ್ನು ಓದಿ: High School Teachers: ಶಾಲಾ ಶಿಕ್ಷಕರಿಗೆ ವಿಶೇಷ ಭತ್ಯೆ ಮಂಜೂರು – ಸರ್ಕಾರದ ಹೊಸ ಆದೇಶ

You may also like

Leave a Comment