UAPA Act: ತೆಹ್ರೀಕ್-ಎ-ಹುರಿಯತ್ ಎಂಬುದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೈಯದ್ ಅಲಿ ಶಾ ಗಿಲಾನಿ ಸ್ಥಾಪಿಸಿದ ಪ್ರತ್ಯೇಕತಾವಾದಿ ರಾಜಕೀಯ ಪಕ್ಷವಾಗಿದೆ. ಕಾಶ್ಮೀರಿ ಪ್ರತ್ಯೇಕತಾವಾದಿ ಪಕ್ಷ ತೆಹ್ರೀಕ್-ಎ-ಹುರಿಯತ್ (Tehreek-e-Hurriyat) (TeH) ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA Act) ಅಡಿಯಲ್ಲಿ ‘ಕಾನೂನುಬಾಹಿರ ಸಂಘ’ ಎಂದು ಘೋಷಣೆ ಮಾಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ಸಂಘಟನೆಯಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಈ ಗುಂಪು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ತೆಹ್ರೀಕ್-ಎ-ಹುರಿಯತ್ ಭಾರತ-ವಿರೋಧಿ ಪ್ರಚಾರವನ್ನು ಹರಡುವಲ್ಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶದಲ್ಲಿ ಪ್ರತ್ಯೇಕತಾವಾದವನ್ನು ಪ್ರೋತ್ಸಾಹ ನೀಡುವ ಕಾರ್ಯವನ್ನು ತೆಹ್ರೀಕ್-ಎ-ಹುರಿಯತ್ ಸಂಘಟನೆ ನಡೆಸುತ್ತಾ ಬಂದಿದೆ. ಇದನ್ನು ದೀರ್ಘಕಾಲ ಪರಿಶೀಲನೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಅಮಿತ್ ಶಾ ಅವರು, ತಮ್ಮ ಟ್ವೀಟ್ನಲ್ಲಿ ‘ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿಯಡಿಯಲ್ಲಿ, ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಇಲ್ಲವೇ ಸಂಘಟನೆಗಳಿಗೆ ತಕ್ಷಣವೇ ಬ್ರೇಕ್ ಹಾಕಲಾಗುವ ಖಡಕ್ ಎಚ್ಚರಿಕೆ ನೀಡಿದ್ದಾರೆ.
