Home » Suicide: ಹೊಸವರ್ಷದಂದೇ ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!!!

Suicide: ಹೊಸವರ್ಷದಂದೇ ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!!!

0 comments

Student Suicide: ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಸುಧಾಮನಗರದ ಮನೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ 21 ವರ್ಷ ವಯಸ್ಸಿನ ವರ್ಷಿಣಿ ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈಕೆ ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ಈಕೆ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು.

ಇದನ್ನೂ ಓದಿ: ತಲೆಯಲ್ಲಿ ಎರಡೂ ಸುರುಳಿಯಿದ್ದರೆ ಏನರ್ಥ ಗೊತ್ತಾ??

ಹೊಸ ವರ್ಷವನ್ನು ಮಾಲ್‌ನಲ್ಲಿ ಸೆಲೆಬ್ರೇಟ್‌ ಮಾಡಬೇಕು, ಫೋಟೋ ಶೂಟ್‌ ಮಾಡಬೇಕು ಎಂದಿದ್ದಕ್ಕೆ ಪೋಷಕರು ಬಿಟ್ಟಿಲ್ಲ ಎಂದು ಕೋಪಗೊಂಡು ಆತುರದ ನಿರ್ಧಾರದಿಂದ ಪ್ರಾಣ ಬಿಟ್ಟಿದ್ದಾಳೆ. ಫೊಟೋಶೂಟ್‌ಗೆ ಹೋಗಬೇಡ ಎಂದಿದ್ದಕ್ಕೆ ನೊಂದ ವರ್ಷಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಿಬಿಎ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ ವರ್ಷಿಣಿ ನಿನ್ನೆ ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಯುವತಿ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಬಂದಿದ್ದು, ತನಿಖೆ ನಡೆಸುತ್ತಿದ್ದಾರೆ.

You may also like

Leave a Comment