Home » Mangalore: ಸಂಸದ ನಳಿನ್‌ಕುಮಾರ್‌ ಕಟೀಲ್‌ ಮನೆಗೆ NSUI ಕಾರ್ಯಕರ್ತರಿಂದ ಮುತ್ತಿಗೆ ಯತ್ನ

Mangalore: ಸಂಸದ ನಳಿನ್‌ಕುಮಾರ್‌ ಕಟೀಲ್‌ ಮನೆಗೆ NSUI ಕಾರ್ಯಕರ್ತರಿಂದ ಮುತ್ತಿಗೆ ಯತ್ನ

1 comment
Mangalore

Mangaluru: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: Adhra-Pan link: ಆಧಾರ್-ಪಾನ್ ಕಾರ್ಡ್ ಲಿಂಕ್ ಬಗ್ಗೆ ಇಲ್ಲಿದೆ ಮತ್ತೊಂದು ಬಿಗ್ ಅಪ್ಡೇಟ್!!

ಉರ್ವಾದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿರುವ ನಳಿನ್‌ ಕುಮಾರ್‌ ಮನೆಗೆ ಮುತ್ತಿಗೆ ಹಾಕಲು ಯತ್ನ ನಡೆದಿದ್ದು, ಪೊಲೀಸರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಡೆ ಹಿಡಿದಿದ್ದಾರೆ. ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ, ಕೇಂದ್ರ ಸರಕಾರ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಘೋಷಣೆ ಕೂಗಿದ್ದಾರೆ.

Mangalore

ಪೊಲೀಸರು ತಡೆಹಿಡಿದರೂ ಎನ್‌ಎಸ್‌ಯುಐ ಕಾರ್ಯಕರ್ತರು ನುಗ್ಗಲು ಯತ್ನ ಮಾಡಿದ್ದು. ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್‌ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

You may also like

Leave a Comment