Home » BS Yediyurappa: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಬಿಎಸ್‌ ಯಡಿಯೂರಪ್ಪ ವಿರುದ್ಧ ಕೇಸು ದಾಖಲು

BS Yediyurappa: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಬಿಎಸ್‌ ಯಡಿಯೂರಪ್ಪ ವಿರುದ್ಧ ಕೇಸು ದಾಖಲು

1 comment
BS Yediyurappa

BS Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾಳೆ ಎಂದು ವರದಿಯಾಗಿದೆ.

ಇದನ್ನೂ ಓದಿ: Parliament Election: ವೀರೇಂದ್ರ ಹೆಗ್ಗಡೆಗೆ ನಡು ಬಗ್ಗಿಸದೆ, ಕಾಲಿಗೆ ಬೀಳದ ಓರ್ವ ಸಂಸದ ಮಂಗಳೂರು ಲೋಕಸಭಾ ಸ್ಥಾನಕ್ಕೆ ಬೇಕಾಗಿದ್ದಾರೆ !

ಫೆ.2 ರಂದು ಸಹಾಯ ಕೇಳಲೆಂದು ಹೋದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆ ಎಫ್‌ಐಆರ್‌ ನಲ್ಲಿ ಉಲ್ಲೇಖ ಮಾಡಿದ್ದಾಳೆ.

ಈ ದೂರಿನನ್ವಯ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾಳೆ.

ಲೋಕಸಭೆ ಚುನಾವಣೆ ಸಮೀಪ ಇರುವ ಕಾರಣ ಬಿಜೆಪಿ ಚುನಾವಣಾ ಚಟುವಟಿಕೆಯನ್ನು ತೊಡಗುತ್ತಿದೆ. ಈ ನಡುವೆ ಪೋಕ್ಸೋ ಪ್ರಕರಣ ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವುದು ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ.

You may also like

Leave a Comment