6
Davanagere: ಪಾನಿಪೂರಿ ತಿಂದ 19 ಮಕ್ಕಳು ಅಸ್ವಸ್ಥಗೊಂಡ ಘಟನೆಯೊಂದು ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ ನಡೆದಿದೆ.
ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಮತರ ಮಸೀದಿ ಮುಂಭಾಗ ಇದ್ದ ಪಾನಿಪೂರಿ ಸೇವಿಸಿದ 19 ಮಂದಿ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ತೀವ್ರ ನಿಗಾ ಘಟಕಕ್ಕೆ ಮಕ್ಕಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ವರದಿಯಾಗಿದೆ.
