Home » Adhar Card Update: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್- 3 ತಿಂಗಳು ಈ ಸೇವೆ ಉಚಿತ !!

Adhar Card Update: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್- 3 ತಿಂಗಳು ಈ ಸೇವೆ ಉಚಿತ !!

2 comments
Adhar Card Update

Adhar Card Update: ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕೆಂದು ಸರ್ಕಾರವು ಹಲವು ತಿಂಗಳಿಂದ ಹೇಳುತ್ತಿದೆ. ಕೆಲವರು ಮಾಡಿದೆ ಇನ್ನು ಕೆಲವರು ಅಪ್ಡೇಟ್ ಮಾಡದೆ ಉದಾಸೀನ ತೋರುತ್ತಿದ್ದಾರೆ. ಹೀಗಾಗಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು ಸರ್ಕಾರ ಮಾರ್ಚ್ 14 ಎಂದು ಡೆಡ್ ಲೈನ್ ನೀಡಿತ್ತು. ಸದ್ಯ ಈ ಗಡುವು ಮುಗಿದಿದೆ. ಆದರೀಗ ಸರ್ಕಾರ ಮತ್ತೆ ಈ ಗಡುವನ್ನು ವಿಸ್ತರಿಸಿದೆ.

ಇದನ್ನೂ ಓದಿ: Agricultural Loan: ಕೃಷಿ ಸಾಲ ಮಾಡಿದವರಿಗೆ ಬೆಳ್ಳಂಬೆಳಗ್ಗೆಯೇ ಭರ್ಜರಿ ಗುಡ್ ನ್ಯೂಸ್ !!

ಹೌದು, ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್ಡೇಟ್(Adhar card Update)ಮಾಡಲು ನೀಡಿದ್ದ ಗಡುವನ್ನು ಜೂನ್ 14ರ ತನಕ ವಿಸ್ತರಿಸಿದೆ. ಮೈ ಆಧಾರ್ ಪೋರ್ಟಲ್ ನಲ್ಲಿ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನೀಡಿದ್ದ ಗಡುವನ್ನು ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಈಗ ಮತ್ತೊಮ್ಮೆ ವಿಸ್ತರಿಸಾಗಿದೆ ಎಂದು ತಿಳಿಸಿದೆ. ಅಂದಹಾಗೆ ಈ ರೀತಿ ಸಮಯ ವಿಸ್ತರಿಸುವುದು ಇದು ಎರಡನೇ ಸಲವಾಗಿದೆ.

ಯಾರು ಅಪ್ಡೇಟ್ ಮಾಡಬೇಕು? ಏನೆಲ್ಲಾ ಮಾಡಬೇಕು?

• ಕಳೆದ 10 ವರ್ಷಗಳಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡದವರು ಆದಷ್ಟು ಬೇಗ ಈ ಕೆಲಸ ಮಾಡುವಂತೆ ಯುಐಡಿಎಐ ಆಗಾಗ ಜನರನ್ನು ಒತ್ತಾಯಿಸುತ್ತಿದೆ.

• ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ಇತರ ಮಾಹಿತಿಗಳನ್ನು ಅಪ್ಡೇಟ್ ಮಾಡೋದು ಕಡ್ಡಾಯ. ಅಂದ ಹಾಗೇ ಈ ಸೌಲಭ್ಯ ಮೈ ಆಧಾರ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿದೆ. 

 

ಉಚಿತವಾಗಿ ಆಧಾರ್ ಮಾಹಿತಿ ಅಪ್ಡೇಟ್ ಮಾಡೋದು ಹೇಗೆ?

ಆಧಾರ್ ನಲ್ಲಿ ಮಾಹಿತಿ ಅಪ್ಡೇಟ್ ಮಾಡೋದು ಹೇಗೆ?

*ಯುಐಡಿಎಐ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

*myaadhaar ಮೇಲೆ ಕ್ಲಿಕ್ ಮಾಡಿ.

*ಆ ಬಳಿಕ ‘Update Aadhaar’ಆಯ್ಕೆ ಮಾಡಿ.

*ನಿಮ್ಮ ಆಧಾರ್ ಸಂಖ್ಯೆ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ.

*ಆ ಬಳಿಕ ‘Send OTP’ಬಟನ್ ಮೇಲೆ ಕ್ಲಿಕ್ ಮಾಡಿ.

*ಈಗ ನಿಮ್ಮ ಮೊಬೈಲ್ ಸಂಖ್ಯೆಗೆ ಬಂದಿರುವ ಒಟಿಪಿ ನಮೂದಿಸಿ.

*Login ಬಟನ್ ಮೇಲೆ ಕ್ಲಿಕ್ ಮಾಡಿ.

*ನಿಮಗೆ ಯಾವ ಮಾಹಿತಿಯನ್ನು ನವೀಕರಿಸಬೇಕು ಅದನ್ನು ಆಯ್ಕೆ ಮಾಡಿ. ಉದಾಹರಣೆಗೆ ವಿಳಾಸ ಬದಲಾಯಿಸಬೇಕಿದ್ದರೆ ‘Address Update’ ಆಯ್ಕೆ ಮಾಡಿ.

*ಈಗ ನಿಮ್ಮ ವಿಳಾಸ ದೃಢೀಕರಣ ದಾಖಲೆಯ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿ.

*ಆ ಬಳಿಕ ‘Submit’ಬಟನ್ ಮೇಲೆ ಕ್ಲಿಕ್ ಮಾಡಿ.

*ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಅಪ್ಡೇಟ್ ರಿಕ್ವೆಸ್ಟ್ ಸಂಖ್ಯೆ (URN) ಬರುತ್ತದೆ.

You may also like

Leave a Comment