Home » Terrible Accident: ಭೀಕರ ರಸ್ತೆ ಅಪಘಾತ; ಖ್ಯಾತ ನಟಿ ಸ್ಥಿತಿ ಗಂಭೀರ

Terrible Accident: ಭೀಕರ ರಸ್ತೆ ಅಪಘಾತ; ಖ್ಯಾತ ನಟಿ ಸ್ಥಿತಿ ಗಂಭೀರ

1 comment
Terrible Accident

Terrible Accident: ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್‌ ಅವರು ಬೈಕ್‌ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಇದೀಗ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅವರ ಸಹೋದರಿ ಆರತಿ ನಾಯರ್‌ ಹೇಳಿದ್ದಾರೆ. ಈ ಘಟನೆ ಮಾ.14 ರಂದು ನಡೆದಿದೆ.

ನಟಿ ಅರುಂಧತಿ ನಾಯರ್ ದಕ್ಷಿಣ ಚಲನಚಿತ್ರರಂಗದ ಜನಪ್ರಿಯ ನಟಿ. ಅರುಂಧತಿ ನಾಯರ್ ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ನಟಿ ಶೀಘ್ರ ಗುಣಮುಖರಾಗಲೆಂದು ಅವರ ಅಭಿಮಾನಿಗಳು ನಿರಂತರವಾಗಿ ಪ್ರಾರ್ಥಿಸುತ್ತಿದ್ದಾರೆ. ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಅರುಂಧತಿ ಅಪಘಾತದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಅಭಿಮಾನಿಗಳಲ್ಲಿ ಕಾಳ್ಗಿಚ್ಚಿನಂತೆ ಹಬ್ಬಿದ್ದು, ಎಲ್ಲರನ್ನೂ ಚಿಂತೆಗೀಡು ಮಾಡಿದೆ.

ತಿರುವನಂತಪುರದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಮೂಲಕ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಕೋವಲಂ ಬೈಪಾಸ್‌ನಲ್ಲಿ ಈ ಅಪಘಾತ ಸಂಭವಿಸಿದ್ದು, ಅರುಂಧತಿ ಅವರ ತಲೆಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗಿದೆ.

ಮಾಧ್ಯಮಗಳ ವರದಿ ಪ್ರಕಾರ, ಅರುಂಧತಿ ತನ್ನ ಸಹೋದರನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ಮನೆಗೆ ಮರಳುತ್ತಿದ್ದ ವೇಳೆ ದಾರಿಯಲ್ಲಿ ವಾಹನವೊಂದು ಆಕೆಯ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯ ನಂತರ ನಟಿ ಮತ್ತು ಅವರ ಸಹೋದರ ಸುಮಾರು ಒಂದು ಗಂಟೆಗಳ ಕಾಲ ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದರು, ಅನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

You may also like

Leave a Comment