Home » Sadananda Gowda: ಕಾಂಗ್ರೆಸ್ ಸೇರ್ಪಡೆ ವಿಚಾರ – ಬಿಗ್ ಅಪ್ಡೇಟ್ ಕೊಟ್ಟ ಸದಾನಂದ ಗೌಡ

Sadananda Gowda: ಕಾಂಗ್ರೆಸ್ ಸೇರ್ಪಡೆ ವಿಚಾರ – ಬಿಗ್ ಅಪ್ಡೇಟ್ ಕೊಟ್ಟ ಸದಾನಂದ ಗೌಡ

1 comment
Sadananda Gowda

Sadananda Gowda: ಲೋಕಸಭಾ ಚುನಾವಣೆಗೆ(Parliament Election) ರಾಜ್ಯದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಯಾಕೆಂದರೆ ಟಿಕೆಟ್ ವಂಚಿತ ಬಿಜೆಪಿಯ ಪ್ರಮುಖ ನಾಯಕರು ಒಳಗೊಳಗೆ ಕೆಂಡಕಾರುತ್ತಿದ್ದಾರೆ. ಈಗಾಗಲೇ ಕೆ ಎಸ್ ಈಶ್ವರಪ್ಪನವರು ಬಂಡಾಯವೆದಿದ್ದು, ಈ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡರು(Sadananda Gowda)ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಎನ್ನಲಾಗಿದ್ದು, ಈ ಬಗ್ಗೆ ಗೌಡರೆ ಬಿಗ್ ಅಪ್ಡೇಟ್ ನೀಡಿದ್ದಾರೆ.

ಇದನ್ನೂ ಓದಿ: Accident: ಅಡ್ಡಾದಿಡ್ಡಿ ಕಾರು ಚಲಾಯಿಸಿದ ಅಪ್ರಾಪ್ತ ಬಾಲಕ, ಇಬ್ಬರು ಮಹಿಳೆಯರಿಗೆ ಡಿಕ್ಕಿ

ಹೌದು, ಇಂದು ಬೆಂಗಳೂರಿನಲ್ಲಿ(Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಸದಾನಂದ ಗೌಡರು ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ಬಂದು ಭೇಟಿ ಮಾಡಿ ಚರ್ಚೆ ಮಾಡಿ ಆಫರ್ ನೀಡಿದ್ದಾರೆ. ನಾನು ಈ ಬಗ್ಗೆ ಮನೆಯವರೊಂದಿಗೆ ಮಾತನಾಡಿ, ನಾಳೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Terrible Accident: ಭೀಕರ ರಸ್ತೆ ಅಪಘಾತ; ಖ್ಯಾತ ನಟಿ ಸ್ಥಿತಿ ಗಂಭೀರ

ಇದರೊಂದಿಗೆ ನನ್ನ ಪಕ್ಷದ ಪ್ರಮುಖರೊಬ್ಬರು ನನ್ನ ಜೊತೆಗೆ ಸಮಾಲೋಚನೆ ಮಾಡಿದ್ದಾರೆ. ನಿನ್ನೆ ನಮ್ಮ ಮನೆಗೆ ಆಗಮಿಸಿ, ಮಾತುಕತೆ ಮಾಡಿದ್ದಾರೆ. ಅವರು ಹೇಳಿರುವ ಮಾತನ್ನು ನಾನು ಈಗ ಹೇಳಲು ಆಗಲ್ಲ. ನಿಮಗೆ ಏನೇ ಸುದ್ದಿ ಬಂದರೂ ಅರ್ಧ ಘಂಟೆ, ಒಂದು ಘಂಟೆ ಮಾತ್ರ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರಿಗೆ ಟಿಕೆಟ್ ಮಿಸ್ ಆಗಿದ್ದು, ಬಂಡಾಯ ಏಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಅದೇ ಕಾರಣಕ್ಕೆ ಅವರನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ಕೂಡ ಪ್ರಯತ್ನ ಪಡುತ್ತಿದೆ. ಒಕ್ಕಲಿಗ ನಾಯಕರಾಗಿರುವ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಫರ್ ನೀಡಿದ್ದಾರೆ ಎನ್ನಲಾಗಿದೆ .

You may also like

Leave a Comment