Home » Mallikharjuna Kharge: ರಾಜಕೀಯ ನಿವೃತ್ತಿ ವಿಚಾರ – ಮಹತ್ವದ ಹೇಳಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ !!

Mallikharjuna Kharge: ರಾಜಕೀಯ ನಿವೃತ್ತಿ ವಿಚಾರ – ಮಹತ್ವದ ಹೇಳಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ !!

6 comments
Mallikharjuna kharge

Mallikharjuna Kharge: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿರುವ ವೇಳೆಯೇ ಕಾಂಗ್ರೆಸ್ ಅಧ್ಯಕ್ಷ(AICC President) ಮಲ್ಲಿಕಾರ್ಜುನ ಖರ್ಗೆ(Mallikharjun Kharge) ಅವರು ರಾಜಕೀಯ ನಿವೃತ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:  Mrunal Takur: ನನಗೆ ಮಗು ಬೇಕು, ಆದ್ರೆ ಎಗ್ ಫ್ರೀಜ್ ಮಾಡಿ ಪಡೆಯುವೆ – ನಟಿ ಮೃಣಾಲ್ !!

ಹೌದು, ಕಲಬುರ್ಗಿಯಲ್ಲಿ(Kalaburgi) ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಪರ ಮತಯಾಚನೆ ಸಂದರ್ಭದಲ್ಲಿ ಮಾತನಾಡಿ ಮಲ್ಲಿಕಾರ್ಜುನ ಖರ್ಗೆ ಅವರು ನಾನು ರಾಜಕೀಯದಿಂದ ಎಂದಿಗೂ ನಿವೃತ್ತರಾಗುವುದಿಲ್ಲ ಎಂದು ಘೋಷಿಸಿದ ಖರ್ಗೆ ನಾನು ಚುನಾವಣೆಗೆ ನಿಲ್ಲುತ್ತೇನೋ ಬಿಡುತ್ತೇನೋ ಆ ಮಾತು ಬೇರೆ. ಆದರೆ ತುಳಿತಕ್ಕೆ ಒಳಗಾದ ಸಮಾಜದ ಪರವಾದ ಹೋರಾಟ ಮಾಡಲು ನಾನು ರಾಜಕೀಯದಲ್ಲಿ ಇರುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಾನು ಎಂದಿಗೂ ರಾಜಕೀಯದಿಂದ ದೂರ ಆಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಇದನ್ನೂ ಓದಿ:  Kadaba: ಉತ್ಸಾಹದಿಂದ ಮತಗಟ್ಟೆಯಲ್ಲೇ ಮತದಾನ ಮಾಡಿದ ಶತಾಯುಷಿ ನಾಡೋಳಿಯ ಕುಜುಂಬಜ್ಜ

ಅಲ್ಲದೆ ಆರ್ ಎಸ್ ಎಸ್(RSS) ಸಿದ್ದಾಂತಗಳನ್ನು ಸೋಲಿಸಲು ನಾನು ಹೋರಾಡುತ್ತಲೇ ಇರುತ್ತೇನೆ. ಕಳೆದ ಸಲದ ಸೋಲಿನ‌ ವಿಚಾರ ಬಿಡಿ. ನಾವು ಮಾಡಿದ ಕೆಲಸಕ್ಕೆ ನೀವು ಆಶೀರ್ವಾದ ಮಾಡಿ ರಾಧಾಕೃಷ್ಣ ಅವರಿಗೆ ಗೆಲ್ಲಿಸಬೇಕು. ನೀವು ಹಾಗೆ ಮಾಡದಿದ್ದರೆ ನಿಮ್ಮ ಹೃದಯದಲ್ಲಿ ನಾನು ಇಲ್ಲ ಎಂದು ತಿಳಿದುಕೊಳ್ಳುತ್ತೇನೆ ಎಂದು ಭಾವುಕರಾಗಿದ್ದಾರೆ.

You may also like

Leave a Comment