Home » CET Result: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶದ ನಂತರ ಸಿಇಟಿ ಫಲಿತಾಂಶ ಪ್ರಕಟ

CET Result: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶದ ನಂತರ ಸಿಇಟಿ ಫಲಿತಾಂಶ ಪ್ರಕಟ

3 comments
CET Result

CET Result: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ-24) ಫಲಿತಾಂಶವನ್ನು ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡಿದ ನಂತರವೇ ಪ್ರಕಟ ಮಾಡಲಾಗುವುದು.

ಇದನ್ನೂ ಓದಿ: Karnataka Government: ಸಿದ್ದು ಸರ್ಕಾರಕ್ಕೆ ಒಂದು ವರ್ಷ ಆಯ್ತು, ಲೋಕಸಭಾ ಚುನಾವಣೆಯೂ ಮುಗಿಯಿತು – ರದ್ದಾಗುತ್ತಾ 5 ಗ್ಯಾರಂಟಿ ?!

ಆದರೆ ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಸೋಮವಾರ (ಇಂದು) ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಹಾಕಿರುವುದು ಸುಳ್ಳು ಸುದ್ದಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Driving License: ವಾಹನ ಸವಾರರಿಗೆ ಮಹತ್ವದ ಮಾಹಿತಿ; ‘ಡ್ರೈವಿಂಗ್ ಲೈಸೆನ್ಸ್‌’ ನಿಯಮದಲ್ಲಿ ಆಗಲಿದೆ ಈ ಮಹತ್ತರ ಬದಲಾವಣೆ!

ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಪಡೆದ ಶೇ.50 ಅಂಕಗಳನ್ನು ಸೇರಿಸಿ ಸಿಇಟಿ ರ್ಯಾಂಕ್‌ ಪಟ್ಟಿಯನ್ನು ಪ್ರಕಟ ಮಾಡಲಾಗುವುದು. ಇದು ನಿಯಮ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ದ್ವಿತೀಯ ಪಿಯುಸಿಗೆ ಸದ್ಯಕ್ಕೆ ಇದೀಗ ಮೂರು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಯಲ್ಲಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೋ ಅವುಗಳನ್ನೇ ಸಿಇಟಿ ರ್ಯಾಂಕ್‌ಗೆ ಬಳಸಲಾಗುವುದು. ಹಾಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯ. ಮೇ. 25 ರಂದು ಬಿಎಸ್ಸಿ ಕೃಷಿ ಪದವಿಗೆ ಪ್ರವೇಶಕ್ಕೆ ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆ ಇರಲಿದ್ದು, ಇದರ ಫಲಿತಾಂಶ ಬರುವುದು ಬಾಕಿ ಇದೆ. ಇದು ಕೂಡಾ ಸಿಇಟಿ ರ್ಯಾಂಕ್‌ಗೆ ಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌ ಪ್ರಸನ್ನ ಅವರು ಹೇಳಿದ್ದಾರೆ.

You may also like

Leave a Comment