Home » Rape on Student: ಮುಖ್ಯ ಶಿಕ್ಷಕನಿಂದಲೇ 7ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ; ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿ

Rape on Student: ಮುಖ್ಯ ಶಿಕ್ಷಕನಿಂದಲೇ 7ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ; ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿ

0 comments
Rape on Student

Rape on Student: ಸರಕಾರಿ ಶಾಲೆ ಮುಖ್ಯ ಶಿಕ್ಷಕನಿಂದಲೇ ಏಳನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಪೊಲೀಸರು ಮುಖ್ಯ ಶಿಕ್ಷಕ ವೆಂಕಟೇಶನನ್ನು ಬಂಧನ ಮಾಡಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ವಿದ್ಯಾರ್ಥಿನಿಗೆ ಕಳೆದ ಐದು ತಿಂಗಳಿಂದ ಮುಟ್ಟಾದ ಕಾರಣ ಪೋಷಕರು ವೈದ್ಯರ ಬಳಿ ಚೆಕಪ್‌ಗೆಂದು ಕರೆದುಕೊಂಡು ಹೋದಾಗ ವಿದ್ಯಾರ್ಥಿನಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ನಂತರ ಪೋಷಕರು ವಿದ್ಯಾರ್ಥಿನಿಯನ್ನು ಪ್ರಶ್ನೆ ಮಾಡಿದಾಗ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್‌ ವಿಷಯ ಬೆಳಕಿಗೆ ಬಂದಿದೆ.

ಶಿಕ್ಷಕ ವಿದ್ಯಾರ್ಥಿನಿ ಮೇಲೆ ಕಳೆದ ಆರು ತಿಂಗಳಿನಿಂದ ಶಾಲೆಯ ಕಚೇರಿ ಕೊಠಡಿಯಲ್ಲಿ ಅತ್ಯಾಚಾರ ಮಾಡುತ್ತಿದ್ದ. ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದರೂ ಉದ್ರೇಕಗೊಳಿಸಿ ಅತ್ಯಾಚಾರ ಮಾಡಿಸಿದ್ದಾನೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ.

ಇದೀಗ ಶಿಕ್ಷಕನ ವಿರುದ್ಧ ಪೋಕ್ಸೋ, ಅತ್ಯಾಚಾರ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿ ಶಿಕ್ಷಕ ವೆಂಕಟೇಶನನ್ನು ಪೊಲೀಸರು ಬಂಧನ ಮಾಡಿದ್ದಾರೆ.

 ಇದನ್ನೂ ಓದಿ: ಹೊಸ ಸಂಚಾರ ನಿಯಮ ಜೂ. 1 ರಿಂದಲೇ ಜಾರಿ ; ಆರ್ಟಿಒ ಆದೇಶ 

You may also like

Leave a Comment