Home » Prajwal Revanna: ಪ್ರಜ್ವಲ್‌ ರೇವಣ್ಣಗೆ ಹೀನಾಯ ಸೋಲು; 25ವರ್ಷಗಳ ಬಳಿಕ ಕಾಂಗ್ರೆಸ್‌ ತೆಕ್ಕೆಗೆ ಹಾಸನ

Prajwal Revanna: ಪ್ರಜ್ವಲ್‌ ರೇವಣ್ಣಗೆ ಹೀನಾಯ ಸೋಲು; 25ವರ್ಷಗಳ ಬಳಿಕ ಕಾಂಗ್ರೆಸ್‌ ತೆಕ್ಕೆಗೆ ಹಾಸನ

0 comments

Prajwal Revanna: ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹೀನಾಯ ಸೋಲನ್ನು ಅನುಭವಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ಗೆ ಗೆಲುವಾಗಿದೆ. ಪಕ್ಷದಿಂದಲೂ ಅಮಾನತಾಗಿರುವ ಪ್ರಜ್ವಲ್‌ ರೇವಣ್ಣ ಒಂದು ವೇಳೆ ಗೆಲುವು ಸಾಧಿಸಿದರೆ ಮುಂದೇನು ಎಂಬ ಪ್ರಶ್ನೆಗೆ ಇದೀಗ ತೆರೆ ಬಿದ್ದಿದೆ.

ಪೆನ್‌ಡ್ರೈವ್‌ ವಿಷಯದಲ್ಲಿ, ಲೈಂಗಿಕ ಕಿರುಕುಳ ಆರೋಪದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಶಾಕಿಂಗ್‌ ನ್ಯೂಸ್‌ ಇದಾಗಿದೆ. ಗೆಲುವಿನ ಅಧಿಕೃಷ ಘೋಷಣೆಯೊಂದೇ ಬಾಕಿಯಿದೆ. ಈ ಮೂಲಕ 25 ವರ್ಷಗಳ ಬಳಿಕ ಹಾಸನದಲ್ಲಿ ಕಾಂಗ್ರೆಸ್‌ ಜಯಗಳಿಸಿದೆ.

ಉಡುಪಿ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಜಯ ಗಳಿಸಿದ್ದಾರೆ.

ಇತ್ತ ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಜಯ ಗಳಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸೋತಿದ್ದಾರೆ.

ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.

ಚಾಮರಾಜನಗರದಲ್ಲಿ ಸಚಿವ ಎಚ್‌ ಸಿ ಮಹದೇವಪ್ಪ ಅವರ ಪುತ್ರ ಸುನಿಲ್‌ ಬೋಸ್‌ ಅವರು ಬಿಜೆಪಿ ಅಭ್ಯರ್ಥಿ ಬಾಲರಾಜ್‌ ವಿರುದ್ಧ ಜಯ ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಸುಧಕರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಜಯ ಗಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದ್ದಾರೆ.

You may also like

Leave a Comment