2
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ 14 ದಿನ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಿದ್ದು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಆಂಡ್ ಗ್ಯಾಂಗ್ ವಿಚಾರಣೆ ನಡೆದಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ ಜು.18 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳು ಆರ್ಥಿಕ ಅಪರಾಧಗಳ ಕೋರ್ಟ್ಗೆ ಹಾಜರಾಗಿದ್ದು, ಈ ವೇಳೆ ಎಸ್ ಪಿಪಿ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡುವಂತೆ ಎಸ್ ಪಿಪಿ ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಿತ್ತು. ಹಾಗಾಗಿ ದರ್ಶನ್. ಪವಿತ್ರ ಸೇರಿ ಇತರ ಆರೋಪಿಗಳಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ನೀಡಲಾಗಿದೆ.
