Home » Actor Vinod Raj: ರೇಣುಕಾಸ್ವಾಮಿ ಕುಟುಂಬಕ್ಕೆ ದೊಡ್ಡ ಮೊತ್ತದ ನೆರವು ನೀಡಿದ ನಟ ವಿನೋದ್ ರಾಜ್!

Actor Vinod Raj: ರೇಣುಕಾಸ್ವಾಮಿ ಕುಟುಂಬಕ್ಕೆ ದೊಡ್ಡ ಮೊತ್ತದ ನೆರವು ನೀಡಿದ ನಟ ವಿನೋದ್ ರಾಜ್!

0 comments

Actor Vinod Raj: ನಟ ವಿನೋದ್ ರಾಜ್ ಅವರು ಚಿತ್ರದುರ್ಗದ  ಮೃತ ರೇಣುಕಾಸ್ವಾಮಿಯ ಮನೆಗೆ ( Actor Vinod Raj) ಭೇಟಿ ನೀಡಿದ್ದು, ರೇಣುಕಾಸ್ವಾಮಿ ಕುಟುಂಬಸ್ಥರಿಗೆ (Renukaswamy Family) ವಿನೋದ್ ರಾಜ್ ಸಾಂತ್ವನ ಹೇಳಿ 1 ಲಕ್ಷ ರೂ. ನೆರವು ನೀಡಿದ್ದಾರೆ.

ಹೌದು, ರೇಣುಕಾಸ್ವಾಮಿ ಕುಟುಂಬ ಬಡತನದಲ್ಲಿ ಇದ್ದು ಪರದಾಡುತ್ತಿದ್ದಾರೆ. ಹೀಗಾಗಿ ಅವರ ಕುಟುಂಬಕ್ಕೆ ಸಹಾಯ ಮಾಡಲು ಹಲವರು ಮುಂದೆ ಬರುತ್ತಿದ್ದಾರೆ. ಇದೀಗ ಮೃತ ರೇಣುಕಾಸ್ವಾಮಿ ನಿವಾಸಕ್ಕೆ ತೆರಳಿ ಪೋಷಕರಿಗೆ ಮತ್ತು ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಾಂತ್ವನ ಹೇಳಿದ ವಿನೋದ್ ರಾಜ್,  ನಿಮ್ಮ ಮಗ ಮರಳಿ ಬರಲಿ ಅಂತ ಹಾರೈಸಿದ್ದಾರೆ. ಬಳಿಕ 1 ಲಕ್ಷ ರೂ. ಕೊಡುವ ಮೂಲಕ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದಾರೆ.

ವಿನೋದ್ ರಾಜ್ ಭೇಟಿಯ ಬಗ್ಗೆ ರೇಣುಕಾಸ್ವಾಮಿ ತಂದೆ ಶಿವನಗೌಡ ಪ್ರತಿಕ್ರಿಯೆ ನೀಡಿದ್ದು, ಮಗನ ಕಳೆದುಕೊಂಡ ನೋವು ಮರೆಯಲು ಸಾಧ್ಯವಿಲ್ಲ, ನಮ್ಮ ಕುಟುಂಬ ಸಂಕಷ್ಟದಲ್ಲಿದೆ. ಮಗನ ಕೊಂದವರು ಯಾರು ಎಂಬುದು ನಮಗೆ ಗೊತ್ತಿಲ್ಲ. ಆದರೆ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಟಿ ಲೀಲಾವತಿ ಅವರ ಬಗ್ಗೆ ತುಂಬಾ ಕೇಳಿದ್ದೇನೆ.’ ಇದೀಗ ಅವರ ಮಗ ವಿನೋದ್ ರಾಜ್ ನಮ್ಮ ಮನೆಗೆ ಭೇಟಿ ನೀಡಿದ್ದು, ಸಮಾಧಾನ ತಂದಿದೆ ಎಂದು ಮಾತನಾಡಿದ್ದಾರೆ.

You may also like

Leave a Comment