Home » Harish poonja: ಚರಕ ಸುತ್ತಿದ್ದರಿಂದ ಸ್ವಾತಂತ್ರ್ಯ ಬಂದಿಲ್ಲ – ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ !

Harish poonja: ಚರಕ ಸುತ್ತಿದ್ದರಿಂದ ಸ್ವಾತಂತ್ರ್ಯ ಬಂದಿಲ್ಲ – ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ !

1 comment

Harish poonja: ಕೇವಲ ಚರಕ ಸುತ್ತಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಬಂದಿಲ್ಲ ಎನ್ನುವ ವಿವಾದಾತ್ಮಕ ಹೇಳಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಹರೀಶ್ ಪೂಂಜಾ (Harish poonja) ಅವರ ಹೇಳಿಕೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಅವಮಾನ ಮಾಡಿದೆ, ಹಾಗಾಗಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಇದೀಗ ಶಾಸಕ ಹರೀಶ್ ಪೂಂಜಾ ಮೇಲೆ ದೂರು ಕೊಡಲಾಗಿದೆ.

ಹೌದು, ಶಾಸಕ ಹರೀಶ್ ಪೂಂಜ ಅವರು ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಾರತೀಯ ಅವರು ಆ.16ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಆ.15ರಂದು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷ ನೆಲೆಯಲ್ಲಿ ಮಾತನಾಡುತ್ತಾ ‘ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಸ್ವಾತಂತ್ರ್ಯ ಬಂದಿಲ್ಲ’ ಎಂದಿದ್ದಾರೆ.

ಹೀಗೆ ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸಿದ ಶಾಸಕ ಹರೀಶ್ ಪೂಂಜಾ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

You may also like

Leave a Comment