Home » Puneeth Kerehalli: ಮತ್ತೊಂದು ಅಕ್ರಮ ದಂಧೆಯನ್ನು ತಡೆಹಿಡಿದ ಪುನೀತ್ ಕೆರೆಹಳ್ಳಿ ತಂಡ!

Puneeth Kerehalli: ಮತ್ತೊಂದು ಅಕ್ರಮ ದಂಧೆಯನ್ನು ತಡೆಹಿಡಿದ ಪುನೀತ್ ಕೆರೆಹಳ್ಳಿ ತಂಡ!

300 comments

Puneeth Kerehalli: ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಯಾವಾಗಲು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇವರು ಸಾಮಾಜಿಕ ಕೆಲಸ ಕಾರ್ಯದಲ್ಲಿ ನಿರತನಾಗಿದ್ದು, ಇದೀಗ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ರಕ್ಷಿಸಿದೆ.

ಹೌದು, ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡದವರು ಮದ್ದೂರಿನಲ್ಲಿ ಆಕ್ರಮವಾಗಿ ಬೆಂಗಳೂರಿನ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಮಾಹಿತಿ ಪ್ರಕಾರ, ಈಚರ್ ವಾಹನದಲ್ಲಿ ಆಕ್ರಮವಾಗಿ 30ಕ್ಕೂ ಹೆಚ್ಚು ಗೋವುಗಳ ಸಾಗಾಟ ಮಾಡಲಾಗುತ್ತಿತ್ತು. ಇದರ ಸುಳಿವು ದೊರೆತ ಪುನೀತ್ ಹಾಗೂ ತಂಡದವರು ಮದ್ದೂರಿನ ಐಬಿ ಸರ್ಕಲ್ ಬಳಿ ವಾಹನ ತಡೆದು‌ ಪರಿಶೀಲನೆ ನಡೆಸಿದ್ದಾರೆ. ನಂತರ ಪುನೀತ್ ಕೆರೆಹಳ್ಳಿ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ವಾಹನದ ಚಾಲಕ ಮನ್ಸೂರು ಅಹಮ್ಮದ್​ನನ್ನು ಪೊಲೀಸರು ಬಂಧಿಸಿದ್ದಾರೆ.

You may also like

Leave a Comment