Home » Valmki Corporation Scam: ವಾಲ್ಮೀಕಿ ನಿಗಮ ಹಗರಣ; ನಾಗೇಂದ್ರನೇ ಮಾಸ್ಟರ್‌ ಮೈಂಡ್‌-ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖ

Valmki Corporation Scam: ವಾಲ್ಮೀಕಿ ನಿಗಮ ಹಗರಣ; ನಾಗೇಂದ್ರನೇ ಮಾಸ್ಟರ್‌ ಮೈಂಡ್‌-ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖ

5 comments
Valmiki Corporation Scam

Valmki Corporation Scam: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 196 ಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ಸಚಿವ ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಕೆ ಮಾಡಿದ ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ವಾಲ್ಮಿಕಿ ನಿಗಮ ಬಹುಕೋಟಿ ಹಗರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಇದೀಗ ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಮೇಲೆ ಆರೋಪ ಹೊರಿಸಿದೆ. ಸಚಿವ ನಾಗೇಂದ್ರ ಅವರೇ ಪ್ರತಿ ಹಂತದ ಡೀಲ್‌ನಲ್ಲಿ ಭಾಗಿಯಾಗಿರುವುದಾಗಿ ಹಾಗೂ ನಿಗಮದ ಹಗರಣದ ಸಂಪೂರ್ಣ ಮಾಸ್ಟರ್‌ ಮೈಂಡ್‌ ಈತನೇ ಎಂದು ಉಲ್ಲೇಖ ಮಾಡಲಾಗಿದೆ.

ಒಟ್ಟು 21 ಕೋಟಿ ಹಣವನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಳಕೆ ಮಾಡಲಾಗಿದೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್‌ ನಡೆದಿದೆ ಎಂದು ಉಲ್ಲೇಖ ಮಾಡಲಾಗಿದೆ. ನಾಗೇಂದ್ರ ಸೇರಿ ಐದು ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿಯಲ್ಲಿ 82 ನೇ ಸಿಸಿಹೆಚ್‌ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.

You may also like

Leave a Comment