Home » Mangaluru: ಸಂಬಂಧಿಕರ ಜೀವ ಉಳಿಸಲು ಲಿವರ್ ದಾನ ಮಾಡಲು ಹೋಗಿ ತಾನೇ ಪ್ರಾಣಬಿಟ್ಟ ಮಹಿಳೆ !!

Mangaluru: ಸಂಬಂಧಿಕರ ಜೀವ ಉಳಿಸಲು ಲಿವರ್ ದಾನ ಮಾಡಲು ಹೋಗಿ ತಾನೇ ಪ್ರಾಣಬಿಟ್ಟ ಮಹಿಳೆ !!

4 comments

Mangaluru: ಸಂಬಂಧಿಕರೊಬ್ಬರ ಜೀವ ಉಳಿಸಲು ಲಿವರ್ ದಾನ ಮಾಡಲು ಹೋಗಿ ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ಕುಂದಾಪುರ(Kundapura) ತಾಲೂಕಿನ ಕೊಟೇಶ್ವರದಲ್ಲಿ ಬೆಳಕಿಗೆ ಬಂದಿದೆ. ಹೌದು, ಉಪನ್ಯಾಸಕಿ ಅರ್ಚನಾ ಕಾಮತ್ (Archana Kamath) 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ(Mangaluru) ಆಸ್ಪತ್ರೆಗೆ ದಾಖಲಾಗಿದ್ದರು. ವಿಪರ್ಯಾಸ ಅಂದ್ರೆ ಚಿಕಿತ್ಸೆ ಎಲ್ಲಾ ನೆರವೇರಿದ ವೇಳೆ ಅರ್ಚನಾ ಸೋಂಕಿಗೆ ತುತ್ತಾಗಿದ್ದಾರೆ.

ಹೀಗಾಗಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ. ಅಂದಹಾಗೆ ತನ್ನ ಪತಿಯ ಸಂಬಂಧಿ ಮಹಿಳೆಯು ಅನಾರೋಗ್ಯದಲ್ಲಿದ್ದು, ಅವರಿಗೆ ಲಿವರ್‌ನ ಅಗತ್ಯವಿತ್ತು ಎನ್ನಲಾಗಿದೆ. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಕೂಡ ರಕ್ತದ ಗುಂಪು ಹೊಂದಾಣಿಕೆಯಾಗಿರಲಿಲ್ಲ. ಆದರೆ ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು.

ಅದರಂತೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಅರ್ಚನಾರ ಲಿವರ್‌ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತಚಿಕಿತ್ಸೆ ನಡೆದಿತ್ತು. ಅಲ್ಲದೆ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಆದರೆ ನಾಲ್ಕು ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ರವಿವಾರ ಅರ್ಚನಾ ಮೃತಪಟ್ಟಿದ್ದಾರೆ. ಲಿವರ್ ಜೋಡಿಸಲ್ಪಟ್ಟ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.

ನಗರದ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಅರ್ಚನಾ ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಮೃತರು ಪತಿ, 4 ವರ್ಷದ ಮಗು ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

You may also like

Leave a Comment