Home » CM siddaramaiah: ‘ಮುಡಾ’ ಹಗರಣದಲ್ಲಿ ಹೈಕೋರ್ಟ್ ತೀರ್ಪು : CM ವಿರುದ್ಧ ತೀರ್ಪು ಬಂದಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ!

CM siddaramaiah: ‘ಮುಡಾ’ ಹಗರಣದಲ್ಲಿ ಹೈಕೋರ್ಟ್ ತೀರ್ಪು : CM ವಿರುದ್ಧ ತೀರ್ಪು ಬಂದಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ!

0 comments

CM siddaramaiah: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ (CM siddaramaiah) ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳಿಂದ, ಸ್ವ ಪಕ್ಷದವರಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ಈಗಾಗಲೇ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಲಿದೆ. ಒಂದು ವೇಳೆ ಈ ತೀರ್ಪು ಸಿದ್ದರಾಮಯ್ಯ ವಿರುದ್ಧ ಇದ್ದಲ್ಲಿ, ಡಿಜಿ & ಐಜಿಪಿ ಅಲೋಕ್ ಮೋಹನ್ ಬೆಂಗಳೂರಿನ ಎಲ್ಲಾ ಕಡೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳ ಎಸ್ ಪಿಗಳಿಗೆ ಡಿಜಿ & ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಎಚ್ಚರ ವಹಿಸುವಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

You may also like

Leave a Comment