Home » Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ!

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ!

285 comments

Weather Report: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಹಾಗೂ ಗುಡುಗಿನ ಸಾಧ್ಯತೆ ಇದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ (Weather Report) ಇದೆ. 

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಹಾಗೂ ಗುಡುಗಿನೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಒಕ್ಟೊಬರ್ 6ರಿಂದ ಅಲ್ಲಲ್ಲಿ ಮಳೆಯಗುವ ಲಕ್ಷಣಗಳಿವೆ. ಒಕ್ಟೊಬರ್ 9ರ ನಂತರ ಒಣ ಹವೆ ಮುಂದುವರಿಯುವ ಸಾಧ್ಯತೆಗಳಿವೆ.

ಇನ್ನು ಮಲೆನಾಡುಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಕ್ಟೊಬರ್ 6ರ ತನಕ ಜೋರು ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗುಡುಗು ಸಹಿತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

You may also like

Leave a Comment