Home » Train: ಪತಿಯೊಂದಿಗೆ ಮನಸ್ತಾಪ! ರೈಲಿಗೆ ತಲೆಕೊಟ್ಟ ಮಹಿಳೆ

Train: ಪತಿಯೊಂದಿಗೆ ಮನಸ್ತಾಪ! ರೈಲಿಗೆ ತಲೆಕೊಟ್ಟ ಮಹಿಳೆ

0 comments

Train: ಗಂಡ ಹೆಂಡತಿ ನಡುವೆ ಮನಸ್ತಾಪ ಉಂಟಾಗಿ, ಈ ಬೇಸರದಿಂದ ಪತ್ನಿ (Woman) ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ದಲ್ಲಿ (Shivamogga) ನಡೆದಿದೆ.

ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

You may also like

Leave a Comment